ಮುಂಬೈ: 1993ರ ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ನೂರ್ ಮೊಹಮ್ಮದ್ ಖಾನ್ ಸೋಮವಾರ ದೀರ್ಘಕಾಲದ ಅನಾರೋಗ್ಯದಿಂದ ಇಲ್ಲಿನ ತಮ್ಮ ನಿವಾಸದಲ್ಲಿ ಮೃತಪಟ್ಟರುಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈ ಸ್ಫೋಟದ ಸಂಚುಕೋರ ಟೈಗರ್ ಮೆಮೊನ್‌ನ ಆಪ್ತನಾಗಿದ್ದ ಖಾನ್ ವೃತ್ತಿಯಲ್ಲಿ ಬಿಲ್ಡರ್ ಆಗಿದ್ದ. ತನ್ನ ಗೋದಾಮಿನಲ್ಲಿ 58 ಆರ್‌ಡಿಎಸ್ ಸ್ಫೋಟಕಗಳನ್ನು ದಾಸ್ತಾನು ಇಟ್ಟುಕೊಂಡಿದ್ದ ಆರೋಪ ಆತನ ಮೇಲಿತ್ತು. ವಿಚಾರಣೆ ನಡೆಸಿದ ವಿಶೇಷ ‘ಟಾಡಾ‘ ನ್ಯಾಯಾಲಯ, 2006ರ ನವೆಂಬರ್24ರಂದು ಆತ ದೋಷಿ ಎಂದು ತೀರ್ಪು ನೀಡಿತ್ತು ಹಾಗೂ ಆತನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.
1993ರ ಮಾರ್ಚ್ 12ರಂದು ಮುಂಬೈ ನಗರದ 12 ಕಡೆಗಳಲ್ಲಿ ಸಂಭವಿಸಿದ ಸರಣಿ ಸ್ಫೋಟಗಳಲ್ಲಿಕನಿಷ್ಠ 257 ಮಂದಿ ಮೃತಪಟ್ಟಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.