ADVERTISEMENT

2ಜಿ: ಸಿಬಿಐನಿಂದ ಮೇಲ್ಮನವಿ

ಪಿಟಿಐ
Published 20 ಮಾರ್ಚ್ 2018, 19:30 IST
Last Updated 20 ಮಾರ್ಚ್ 2018, 19:30 IST
2ಜಿ: ಸಿಬಿಐನಿಂದ ಮೇಲ್ಮನವಿ
2ಜಿ: ಸಿಬಿಐನಿಂದ ಮೇಲ್ಮನವಿ   

ನವದೆಹಲಿ: 2ಜಿ ತರಂಗಾಂತರ ಹಂಚಿಕೆ ಹಗರಣದಲ್ಲಿ ಮಾಜಿ ದೂರಸಂಪರ್ಕ ಸಚಿವ ಎ.ರಾಜಾ ಮತ್ತು ಡಿಎಂಕೆ ಸಂಸದೆ ಕನಿಮೊಳಿ ಅವರನ್ನು ಖುಲಾಸೆ ಮಾಡಿದ್ದರ ವಿರುದ್ಧ ಸಿಬಿಐ ಮಂಗಳವಾರ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ.

ದೆಹಲಿ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್, ಸಿಬಿಐನ ಮೇಲ್ಮನವಿಯನ್ನು ಪರಿಶೀಲಿಸಿದರು. ಅರ್ಜಿಯ ವಿಚಾರಣೆ ಬುಧವಾರ ನಡೆಯಲಿದೆ.

ಈ ಇಬ್ಬರನ್ನು ಖುಲಾಸೆ ಮಾಡಿದ್ದರ ವಿರುದ್ಧ ಜಾರಿ ನಿರ್ದೇಶನಾಲಯ ಸಹ ಸೋಮವಾರ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ADVERTISEMENT

ಈ ಪ್ರಕರಣದ ವಿಚಾರಣೆ ನಡೆಸಿದ್ದ ವಿಶೇಷ ನ್ಯಾಯಾಲಯವು ಕಳೆದ ಡಿಸೆಂಬರ್ 21ರಂದು ಈ ಇಬ್ಬರನ್ನು ಖುಲಾಸೆ ಮಾಡಿ ತೀರ್ಪು ನೀಡಿತ್ತು. ಜತೆಗೆ ಇನ್ನೂ 17 ಆರೋಪಿಗಳನ್ನು ವಿಶೇಷ ನ್ಯಾಯಾಲಯ ಖುಲಾಸೆ ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.