ADVERTISEMENT

2ಜಿ ಹಗರಣ: ಅನಿಲ್ ಅಂಬಾನಿಗೆ ಸಿಬಿಐ ಕ್ಲೀನ್ ಚಿಟ್

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2011, 12:20 IST
Last Updated 2 ಅಕ್ಟೋಬರ್ 2011, 12:20 IST

ನವದೆಹಲಿ (ಪಿಟಿಐ): 2ಜಿ ತರಂಗಾಂತರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ಎ ಡಿಎಜಿ ಅಧ್ಯಕ್ಷ ಅನಿಲ್ ಅಂಬಾನಿ ಅವರ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದ ಸಿಬಿಐ ಇದೀಗ ಅವರನ್ನು ಆರೋಪ ಮುಕ್ತರನ್ನಾಗಿ ಮಾಡಿದೆ.
 
2ಜಿ ತರಂಗಾಂತರ ಪರವಾನಗಿ ಪಡೆದ ಸ್ವಾನ್ ಟೆಲಿಕಾಂಗೆ ಸೇರಿದ ಹಣವನ್ನು ವರ್ಗಾವಣೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಮತ್ತು ವಿವಿಧ ಕಂಪೆನಿಗಳನ್ನು ರೂಪಿಸಿರುವುದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟಿಗೆ ಸಲ್ಲಿಸಲಾದ ತನ್ನ ವಸ್ತುಸ್ಥಿತಿ ವರದಿಯಲ್ಲಿ ಅನಿಲ್ ಅಂಬಾನಿ ಅವರನ್ನು ದೋಷಿಯಾಗಿಸುವಂತಹ ಯಾವುದೇ ಸಾಕ್ಷ್ಯಾಧಾರಗಳು ತನಿಖೆಯಲ್ಲಿ ಲಭಿಸಿಲ್ಲ ಎಂದು ಹೇಳಿದೆ.

ಸೆಪ್ಟೆಂಬರ್ 29ರಂದು ಸುಪ್ರೀಂಕೋರ್ಟಿಗೆ ಈ ವರದಿಯನ್ನು ಸಲ್ಲಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.