ADVERTISEMENT

2ಜಿ ಹಗರಣ: ಏಪ್ರಿಲ್‌ 4ರಂದು ಹೇಳಿಕೆ ದಾಖಲು

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2014, 19:30 IST
Last Updated 3 ಮಾರ್ಚ್ 2014, 19:30 IST

ನವದೆಹಲಿ (ಪಿಟಿಐ): ಮಾಜಿ ದೂರಸಂಪರ್ಕ ಸಚಿವ ಎ. ರಾಜಾ, ಡಿಎಂಕೆ ಸಂಸದೆ ಕನಿಮೊಳಿ ಮತ್ತು ಕೆಲವು ಉದ್ಯಮಿಗಳು ಸೇರಿದಂತೆ 2ಜಿ ತರಂಗಾಂತರ ಹಂಚಿಕೆ ಹಗರಣದ ಆರೋಪಿಗಳ ಹೇಳಿಕೆಯನ್ನು ವಿಶೇಷ ಸಿಬಿಐ ನ್ಯಾಯಾಲಯ ಏಪ್ರಿಲ್‌ 4ರಂದು ದಾಖಲಿಸಿಕೊಳ್ಳಲಿದೆ.

ಸೋಮವಾರ ಆರೋಪಿಗಳ ಹೇಳಿಕೆ ದಾಖಲಿಸಿಕೊಳ್ಳಲು ಸಿಬಿಐ ವಿಶೇಷ ನ್ಯಾಯಾಲಯದ ನ್ಯಾಯಾ­ಧೀಶ ಒ.ಪಿ. ಶೈನಿ  ನಿರ್ಧರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.