ADVERTISEMENT

2ಜಿ ಹರಾಜು: ಕಾಲಾವಕಾಶ ಕೋರಿದ ಕೇಂದ್ರ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2012, 19:30 IST
Last Updated 1 ಮಾರ್ಚ್ 2012, 19:30 IST

ನವದೆಹಲಿ: 2ಜಿ ತರಂಗಾಂತರ ಹಂಚಿಕೆ ಹಗರಣ ಕುರಿತಂತೆ ಸುಪ್ರೀಂ ಕೋರ್ಟ್ ರದ್ದು ಮಾಡಿರುವ 122 ಪರವಾನಗಿಗಳನ್ನು ಹೊಸದಾಗಿ ಹರಾಜು ಮಾಡಲು ಕಾಲಾವಕಾಶ ನೀಡುವಂತೆ ಕೇಂದ್ರ ಸರ್ಕಾರ ಸರ್ವೋಚ್ಚ ನ್ಯಾಯಾಲಯವನ್ನು ಕೋರಿದೆ.

ಈ ಹರಾಜು ಪ್ರಕ್ರಿಯೆಗೆ ಕನಿಷ್ಠ 400 ದಿನಗಳ ಅಗತ್ಯವಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪಿ. ಚಿದಂಬರಂ ವಿರುದ್ಧ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ನಿದೇರ್ಶನ ನೀಡಬೇಕು ಎಂದು ಕೋರಿರುವ ಅರ್ಜಿ ವಿಚಾರಣೆಯನ್ನು ಹೋಳಿ ಹಬ್ಬದ ನಂತರ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್ ಹೇಳಿದೆ.

2ಜಿ ಹಗರಣದಲ್ಲಿ ಆಗ ಹಣಕಾಸು ಸಚಿವರಾಗಿದ್ದ ಚಿದಂಬರಂ ಅವರ ಪಾತ್ರವೂ ಇದೆ. ಆದ್ದರಿಂದ ಅವರ ವಿರುದ್ಧ ತನಿಖೆಗೆ ನಿರ್ದೇಶನ ನೀಡಬೇಕು ಎಂದು ಕೋರಿದ ಅರ್ಜಿ ಇದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.