ADVERTISEMENT

2ನೇ ಹಂತದ ಮತದಾನ ಇಂದು

​ಪ್ರಜಾವಾಣಿ ವಾರ್ತೆ
Published 13 ಡಿಸೆಂಬರ್ 2017, 19:30 IST
Last Updated 13 ಡಿಸೆಂಬರ್ 2017, 19:30 IST
2ನೇ ಹಂತದ ಮತದಾನ ಇಂದು
2ನೇ ಹಂತದ ಮತದಾನ ಇಂದು   

ಅಹಮದಾಬಾದ್‌: ಗುಜರಾತ್‌ ವಿಧಾನಸಭೆಗೆ ಎರಡನೇ ಹಂತದ ಮತದಾನ ಗುರುವಾರ ನಡೆಯಲಿದೆ. ಮಧ್ಯ ಮತ್ತು ಉತ್ತರ ಗುಜರಾತಿನ 14 ಜಿಲ್ಲೆಗಳ ಜನರು ಮತ ಚಲಾಯಿಸಲಿದ್ದಾರೆ.

ಕಳೆದ ಕೆಲವು ವಾರ ಗುಜರಾತಿನ ವಿವಿಧೆಡೆ ಭರದ ಪ್ರಚಾರ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್‌ ಗಾಂಧಿ ದೆಹಲಿಗೆ ಹಿಂದಿರುಗಿದ್ದಾರೆ. ಬಹಿರಂಗ ಪ್ರಚಾರದ ಅಬ್ಬರ ನಿಂತು ಹೋಗಿದ್ದರೂ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಸಾಮಾಜಿಕ ಮಾಧ್ಯಮಗಳ ಮೂಲಕ ಮತದಾರರ ಮನವೊಲಿಸುವ ಕೊನೆಯ ಕ್ಷಣದಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಎಲ್ಲ 93 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳಿದ್ದರೆ 91 ಕಡೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ನಿಲ್ಲಿಸಿದೆ. ಬಿಜೆಪಿ ಮಿತ್ರ ಪಕ್ಷ ಶಿವಸೇನಾದ 17  ಉಮೇದುವಾರರು ಕಣದಲ್ಲಿದ್ದಾರೆ.

782 ಪುರುಷ ಮತ್ತು 69 ಮಹಿಳೆಯರು ಸೇರಿ ಒಟ್ಟು 851 ಅಭ್ಯರ್ಥಿಗಳು ಕಣದಲ್ಲಿದ್ದಾರೆ. 89 ಕ್ಷೇತ್ರಗಳಿಗೆ ಈಗಾಗಲೇ ಮತದಾನ ನಡೆದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.