ADVERTISEMENT

2 ಜಿ: ಸುಪ್ರೀಂನಿಂದ ಪುನರ್ ಪರಿಶೀಲನಾ ಅರ್ಜಿ ಅವಲೋಕನ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2012, 19:30 IST
Last Updated 3 ಏಪ್ರಿಲ್ 2012, 19:30 IST

ನವದೆಹಲಿ (ಪಿಟಿಐ): 2 ಜಿ ತರಂಗಾಂತರ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನು ನೀಡಿರುವ ವಿವಿಧ ತೀರ್ಪುಗಳ ಹಿನ್ನೆಲೆಯಲ್ಲಿ ಸಲ್ಲಿಕೆಯಾಗಿರುವ ಹಲವು ಪುನರ್ ಪರಿಶೀಲನಾ ಅರ್ಜಿಗಳನ್ನು ಸುಪ್ರೀಂಕೋರ್ಟ್ ಮಂಗಳವಾರ ಅವಲೋಕಿಸಿತು.

ನ್ಯಾಯಮೂರ್ತಿಗಳಾದ ಜಿ.ಎಸ್. ಸಿಂಘ್ವಿ ಮತ್ತು ಕೆ.ಎಸ್.ರಾಧಾಕೃಷ್ಣನ್ ತಮ್ಮ ಕೊಠಡಿಯಲ್ಲಿ ಈ ಅರ್ಜಿಗಳನ್ನು ಅವಲೋಕಿಸಿದರು. ಆದರೆ ಅವುಗಳ ಕುರಿತು ಏನು ನಿರ್ಧಾರ ಕೈಗೊಂಡರೆಂಬುದು ಇನ್ನೂ ಗೊತ್ತಾಗಿಲ್ಲ.

ರಾಜಾ ಅವರು 2008ರಲ್ಲಿ ಮಂಜೂರು ಮಾಡಿದ್ದ 122 ಲೈಸನ್ಸ್‌ಗಳ ರದ್ದತಿ, ನೈಸರ್ಗಿಕ ಸಂಪನ್ಮೂಲಗಳ ಹಂಚಿಕೆಯಲ್ಲಿ `ಮೊದಲು ಬಂದವರಿಗೆ ಮೊದಲು ಆದ್ಯತೆ~ ನೀತಿ ಅನುಸರಿಸಬಾರದು ಎಂಬುದು ಸೇರಿದಂತೆ ಹಲವು ತೀರ್ಪುಗಳನ್ನು ಸುಪ್ರೀಂಕೋರ್ಟ್ 2 ಜಿ ಪ್ರಕರಣದ ಸಂಬಂಧ ಪ್ರಕಟಿಸಿದೆ.

ರಾಜಾ ಅವರ ವಿರುದ್ಧ ಸಲ್ಲಿಕೆಯಾಗಿದ್ದ ದೂರಿನ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಉಪೇಕ್ಷಿಸಿದ್ದ ಪ್ರಧಾನಿ ಕಚೇರಿಯನ್ನೂ ನ್ಯಾಯಾಲಯ ತರಾಟೆಗೆ ತೆಗೆದುಕೊಂಡಿತ್ತು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.