ಪ್ರಾತಿನಿಧಿಕ ಚಿತ್ರ
ಜಮ್ಮು: ಜಮ್ಮುವಿನ ಅಖನೂರ್ ಸೆಕ್ಟರ್‌ನ ಗಡಿ ನಿಯಂತ್ರಣಾ ರೇಖೆ ಬಳಿ ಸುಧಾರಿತ ಕಚ್ಚಾ ಬಾಂಬ್ (ಐಇಡಿ) ಸ್ಫೋಟಗೊಂಡು ಸೇನಾಧಿಕಾರಿ ಸೇರಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ.
ಐಇಡಿಯನ್ನು ಉಗ್ರರು ಇರಿಸಿದ್ದಾಗಿ ಶಂಕಿಸಲಾಗಿದೆ. ಮಧ್ಯಾಹ್ನ 3.50 ರ ಹೊತ್ತಿಗೆ ಗಡಿಯಲ್ಲಿ ಗಸ್ತು ತಿರುಗುತ್ತಿದ್ದಾಗ ಐಇಡಿ ಸ್ಫೋಟಗೊಂಡಿದೆ. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ.
ಘಟನೆಯಲ್ಲಿ ಗಾಯಗೊಂಡ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಣಾಪಾಯದಿಂದ ಅವರು ಪಾರಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಐಇಡಿ ಸ್ಫೋಟಗೊಂಡ ಸ್ಥಳದಲ್ಲಿ ಶೋಧ ಕಾರ್ಯ ನಡೆಸಲಾಗುತ್ತಿದ್ದು, ಸುತ್ತಲಿನ ಪ್ರದೇಶವನ್ನು ಸೇನಾಪಡೆ ಸುತ್ತುವರೆದಿದೆ ಎಂದು ಸೇನೆ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.