ಬಂಧನ
ಬರೇಲಿ(ಉತ್ತರ ಪ್ರದೇಶ): ಸಾಮಾಜಿಕ ಜಾಲತಾಣದಲ್ಲಿ ‘ದೇಶ ವಿರೋಧಿ’ ವಿಷಯವನ್ನು ಹಂಚಿಕೊಂಡಿರುವ ಆರೋಪದಡಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ಇರ್ಫಾನ್ ಮತ್ತು ವಾಜಿದ್ ಶಾ, ‘ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗುವ ಮತ್ತು ಜನರ ನಾಲಿಗೆ ಕತ್ತರಿಸುವುದಾಗಿ ಬೆದರಿಕೆ ಹಾಕಿರುವ ವಿಡಿಯೊವೊಂದನ್ನು ಇನ್ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ’ ಎಂದು ಬಿತ್ರಿ ಚೈನಪುರದ ಠಾಣಾಧಿಕಾರಿ ಅಭಿಷೇಕ್ ಕುಮಾರ್ ತಿಳಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಇಬ್ಬರ ವಿರುದ್ಧ ಭಾರತೀಯ ನ್ಯಾಯ ಸಂಹಿತೆ 353(2) (ಸಾರ್ವಜನಿಕ ಕಿಡಿಗೇಡಿತನ) ಅಡಿ ಮತ್ತು ಐಟಿ ಕಾಯ್ದೆಯಡಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.