ಚಂಡೀಗಡ: ಗಾಯಕ ಸಿಧು ಮೂಸೆವಾಲಾ ಹತ್ಯೆಯ ಸಂಚುಕೋರ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್‌ನ ಇಬ್ಬರು ಸಹಚರರನ್ನು ಪಂಜಾಬ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಬಟಿಂಡಾದ ಮಲ್ಕಿತ್ ಸಿಂಗ್ ಮತ್ತು ಹರ್ದೀಪ್ ಸಿಂಗ್ ಬಂಧಿತರು. ಹರಿಯಾಣಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಇವರನ್ನು ಬಂಧಿಸಲಾಗಿದೆ. ಇವರು ಹಲವು ಪ್ರಕರಣಗಳಲ್ಲಿ ಆರೋಪಿಗಳು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.