ADVERTISEMENT

ಉತ್ತರ ಪ್ರದೇಶ: ಮಸೀದಿಯಲ್ಲಿ ಕಂಬ ಕುಸಿದು ಇಬ್ಬರು ಮಕ್ಕಳ ಸಾವು

ಶಾಮ್ಲಿ ಜಿಲ್ಲೆಯಲ್ಲಿ ಪ್ರಾರ್ಥನೆ ಸಲ್ಲಿಸುವ ವೇಳೆ ನಡೆದಿರುವ ಘಟನೆ

ಪಿಟಿಐ
Published 29 ಮಾರ್ಚ್ 2021, 5:23 IST
Last Updated 29 ಮಾರ್ಚ್ 2021, 5:23 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಜಾಫರ್‌ನಗರ: ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಮೊಮಿನ್ ನಗರದಲ್ಲಿನ ಮಸೀದಿಯೊಂದರ ಕಂಬ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ.

ಭಾನುವಾರ ರಾತ್ರಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಇನ್ನೊಬ್ಬ ಬಾಲಕ ತೀವ್ರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.‌

ಶಾಬ್‌–ಎ–ಬರಾತ್‌ ಅಂಗವಾಗಿ ಭಾನುವಾರ ರಾತ್ರಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ ಎಂದು ಅವರು ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.