ADVERTISEMENT

ಮಧ್ಯಪ್ರದೇಶದಲ್ಲಿ ಭಾರಿ ಮಳೆ; ಇಬ್ಬರು ಸಾವು

ಪಿಟಿಐ
Published 5 ಆಗಸ್ಟ್ 2021, 8:32 IST
Last Updated 5 ಆಗಸ್ಟ್ 2021, 8:32 IST
ಮಧ್ಯಪ್ರದೇಶದ ಗ್ವಾಲಿಯರ್‌ನ ಮೊಹನಾ ಹಳ್ಳಿಯಲ್ಲಿ ಪ‍್ರವಾಹದಲ್ಲಿ ಸಿಲುಕಿರುವ ಜನರನ್ನು ಎನ್‌ಡಿಆರ್‌ಎಫ್‌ ತಂಡದವರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು  –ಪಿಟಿಐ ಚಿತ್ರ
ಮಧ್ಯಪ್ರದೇಶದ ಗ್ವಾಲಿಯರ್‌ನ ಮೊಹನಾ ಹಳ್ಳಿಯಲ್ಲಿ ಪ‍್ರವಾಹದಲ್ಲಿ ಸಿಲುಕಿರುವ ಜನರನ್ನು ಎನ್‌ಡಿಆರ್‌ಎಫ್‌ ತಂಡದವರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು  –ಪಿಟಿಐ ಚಿತ್ರ   

ಭೋಪಾಲ್: ಮಧ್ಯಪ್ರದೇಶದ ಗ್ವಾಲಿಯರ್-ಚಂಬಲ್ ಕಣಿವೆ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ಸೇತುವೆಗಳು ಕೊಚ್ಚಿ ಹೋಗಿವೆ. ಮಳೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ಕಳೆದ 70 ವರ್ಷಗಳಲ್ಲಿ ರಾಜ್ಯ ಎಂದೂ ಇಂತಹ ಮಳೆಹಾನಿ ಕಂಡಿಲ್ಲ‘ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ ಹೇಳಿದರು.

ಭಾರಿ ಮಳೆಯಿಂದಾಗಿ ರತಂಗರ್ ಮಾತಾ ದೇವಸ್ಥಾನ ಮತ್ತು ಸಂಕುವಾ ಬಳಿಯ ಸೇತುವೆಗಳು ಹಾನಿಗೊಳಗಾಗಿವೆ. ಹೀಗಾಗಿ ಅನೇಕ ಜನರು ಅಲ್ಲಿಯೇ ಸಿಲುಕಿಕೊಂಡಿದ್ದಾರೆ ಎಂದು ಚೌಹಾಣ್ ಹೇಳಿದರು.

ಪ್ರವಾಹ ಪೀಡಿತ ಪ್ರದೇಶಗಳಾದ ಭಿಂಡಿ ಜಿಲ್ಲೆ ಮತ್ತು ಶಿವಪುರಿ ಜಿಲ್ಲೆಯ ಕರೇರಾರ ಪ್ರದೇಶಗಳಿಂದ ಜನರನ್ನು ರಕ್ಷಿಸಲು ವೈಮಾನಿಕ ಕಾರ್ಯಾಚರಣೆ ಆರಂಭಿಸಲಾಗಿದೆ ಎಂದು ತಿಳಿಸಿದರು.

ADVERTISEMENT

ಮಳೆ ಸಂಬಂಧಿತ ಅನಾಹುತಗಳಿಂದಾಗಿ ಶಿವಪುರಿ ಮತ್ತು ಶಿಯೊಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ಕಂದಾಯ ಇಲಾಖೆ ಕಾರ್ಯದರ್ಶಿ ಜ್ಞಾನೇಶ್ವರ್ ಪಿ ಪಾಟೀಲ್ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಚೌಹಾಣ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಮಳೆ ಅನಾಹುತದ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರವಾಹ ಪರಿಸ್ಥಿತಿ ಎದುರಿಸಲು ಬೇಕಾದ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಇಬ್ಬರೂ ನಾಯಕರು ಭರವಸೆ ನೀಡಿದ್ದಾಗಿ ಚೌಹಾಣ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.