ADVERTISEMENT

ಉತ್ತರ ಪ್ರದೇಶ: ಗೋಡೆ ಕುಸಿದು ಇಬ್ಬರು ಸಾವು

​ಪ್ರಜಾವಾಣಿ ವಾರ್ತೆ
Published 21 ಏಪ್ರಿಲ್ 2024, 14:08 IST
Last Updated 21 ಏಪ್ರಿಲ್ 2024, 14:08 IST
...
...   

ಪಿಲಿಭಿತ್‌ (ಉತ್ತರ ಪ್ರದೇಶ): ಇಲ್ಲಿನ ಬಸುಧಾ ಗ್ರಾಮದಲ್ಲಿ ಮದುವೆಯ ಟೆಂಟ್ ಮೇಲೆ ಗೋಡೆ ಕುಸಿದ ಪರಿಣಾಮ ಇಬ್ಬರು ಪುರುಷರು ಮೃತಪಟ್ಟಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ ಮದುವೆ ಮನೆಯಲ್ಲಿ ಜನರು ಊಟ ಮಾಡುವಾಗ ಈ ಘಟನೆ ಸಂಭವಿಸಿದೆ ಎಂದು ಬೀಸಲ್‌ಪುರದ ಎಸ್‌ಎಚ್‌ಒ ಅಶೋಕ್ ಪಾಲ್ ತಿಳಿಸಿದ್ದಾರೆ.

ಮಹಾವೀರ್ (25) ಮತ್ತು ಚಂದ್ರವೀರ್ (30) ಇಬ್ಬರೂ ಚಿಕಿತ್ಸೆಗೆ ಸ್ಪಂದಿಸದೆ ಸಾವಿಗೀಡಾಗಿದ್ದಾರೆ. ಇನ್ನೂ ಎಂಟು ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.