ನವದೆಹಲಿ: ಅಮೆರಿಕದಲ್ಲಿರುವ ಬಾಲಕಿಯರಿಗೆ ಅಶ್ಲೀಲ ಚಿತ್ರ ಮತ್ತು ವಿಡಿಯೊಗಳನ್ನು ಕಳುಹಿಸುವಂತೆ ಆನ್‌ಲೈನ್‌ನಲ್ಲಿ ಬೆದರಿಕೆ ಹಾಕಿದ ಆರೋಪ ಸಂಬಂಧ ಮಂಗಳೂರು ಮೂಲದ ವ್ಯಕ್ತಿ ಸೇರಿ ಇಬ್ಬರು ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.
ಈ ಕುರಿತು ಬುಧವಾರ ಮಾಹಿತಿ ನೀಡಿದ ಅಧಿಕಾರಿಗಳು, ‘ಅಮೆರಿಕದ ತನಿಖಾ ಏಜೆನ್ಸಿಗಳು ನೀಡಿದ ಮಾಹಿತಿ ಮೇರೆಗೆ ದೇಶದಲ್ಲಿ ‘ಆಪರೇಷನ್ ಹಾಕ್’ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಸಿಬಿಐನ ಅಂತರರಾಷ್ಟ್ರೀಯ ಕಾರ್ಯಾಚರಣೆ ವಿಭಾಗವು ಪ್ರತ್ಯೇಕ ಪ್ರಕರಣಗಳಲ್ಲಿ ಮಂಗಳೂರು ಮೂಲದ ಶೇಖ್ ಮುಯಿಝ್ ಅಹ್ಮದ್ ಮತ್ತು ದೆಹಲಿ ನಿವಾಸಿ ಮುಕುಲ್ ಸೈನಿ ಅವರನ್ನು ಬಂಧಿಸಲಾಗಿದೆ’ ಎಂದು ತಿಳಿಸಿದರು.
ಆರೋಪಿಗಳ ವಿರುದ್ಧ ಐಪಿಸಿಯ ವಿವಿಧ ಸೆಕ್ಷನ್‌ಗಳಡಿ, ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.