ಬಂಧನ ( ಸಾಂಕೇತಿಕ ಚಿತ್ರ)
ಗುಜರಾತ್: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಸ್ಥಳೀಯರಿಗೆ ಹಣ ಮತ್ತು ಇತರ ಪ್ರಯೋಜನಗಳ ಆಮಿಷವೊಡ್ಡುತ್ತಿದ್ದ ಆರೋಪದ ಮೇಲೆ ಗುಜರಾತ್‌ನ ಸುರೇಂದ್ರನಗರ ಜಿಲ್ಲೆಯಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಗಳು, ಧಾರ್ಮಿಕ ಮತಾಂತರಗೊಳ್ಳುವಂತೆ ಕೆಲವು ವ್ಯಕ್ತಿಗಳಿಗೆ (ದೂರುದಾರರೂ ಸೇರಿದಂತೆ) ₹20,000 ಮತ್ತು ಇತರ ಪ್ರಯೋಜನಗಳ ಆಮಿಷ ನೀಡುತ್ತಿದ್ದರು. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡರೆ ಅನಾರೋಗ್ಯ ಮತ್ತು ಆರ್ಥಿಕ ತೊಂದರೆಗಳಿಂದ ಹೊರಬರಲು ಸಹಾಯವಾಗುತ್ತದೆ ಎಂದು ಮನವೊಲಿಸಲು ಯತ್ನಿಸಿದ್ದಾರೆ ಎಂದು ವ್ಯಕ್ತಿಯೊಬ್ಬರು ನೀಡಿರುವ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಎಂದು ಅವರು ಹೇಳಿದ್ದಾರೆ.
ಸುರೇಂದ್ರನಗರದ ರತಿಲಾಲ್ ಪರ್ಮಾರ್ ಮತ್ತು ರಾಜಸ್ಥಾನದ ಉದಯಪುರದ ಮೂಲದ ಭನ್ವರ್‌ಲಾಲ್ ಪಾರ್ಧಿ ಎಂಬವರನ್ನು ಬಂಧಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವಡಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಇನ್‌ಸ್ಪೆಕ್ಟರ್ ಡಿ.ಆರ್ ಪಧೇರಿಯಾ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.