ನವದೆಹಲಿ: ‘ಅಫ್ಗಾನಿಸ್ತಾನದಲ್ಲಿ ಅಪಹರಣಕ್ಕೊಳಗಾಗಿದ್ದ ಇಬ್ಬರು ನಾಗರಿಕರುಭಾರತಕ್ಕೆ ಮರಳಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯವು ಮಂಗಳವಾರ ತಿಳಿಸಿದೆ.
2018ರ ಮೇ ತಿಂಗಳಲ್ಲಿ ಭಾರತದ ಒಟ್ಟು ಏಳು ಮಂದಿ ಪ್ರಜೆಗಳನ್ನು ಅಪಹರಿಸಲಾಗಿತ್ತು. ಈ ಪೈಕಿ ನಾಲ್ಕು ಮಂದಿ ಈ ಹಿಂದೆಯೇ ತವರಿಗೆ ಹಿಂತಿರುಗಿದ್ದರು. ಕಳೆದ ತಿಂಗಳ 31ರಂದು ಇನ್ನಿಬ್ಬರನ್ನು ಬಿಡುಗಡೆ ಮಾಡಲಾಗಿತ್ತು.
‘ಭಾರತದ ಪ್ರಜೆಗಳನ್ನು ಸುರಕ್ಷಿತವಾಗಿ ಕಳುಹಿಸಿಕೊಟ್ಟ ಅಫ್ಗಾನಿಸ್ತಾನ ಸರ್ಕಾರಕ್ಕೆ ನಾವು ಆಭಾರಿಯಾಗಿದ್ದೇವೆ. ಆ ದೇಶದ ಸಹಕಾರವನ್ನು ಎಂದಿಗೂ ಮರೆಯುವುದಿಲ್ಲ’ ಎಂದು ಸಚಿವಾಲಯವು ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.