ದೇವರಿಯಾ, ಉತ್ತರ ಪ್ರದೇಶ: ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿಯೊಬ್ಬ ಆಸ್ಪತ್ರೆಯಿಂದ ತಪ್ಪಿಸಿಕೊಂಡಿರುವ ಪ್ರಕರಣ ಇಲ್ಲಿ ನಡೆದಿದೆ. ಈ ಪ್ರಕರಣ ಸಂಬಂಧಿಸಿ ಇಬ್ಬರು ಜೈಲು ಕಾವಲು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಮತ್ತು ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಬುಧವಾರ ಅಧಿಕಾರಿಗಳು ತಿಳಿಸಿದ್ದಾರೆ.
ಮಹಿಳೆಯೊಬ್ಬರನ್ನು ಕೊಂದ ಆರೋಪದ ಮೇಲೆ ಬಂಧಿತನಾಗಿದ್ದ ಪ್ರವೀಣ್ ಪಾಲ್ ತನಗೆ ಅನಾರೋಗ್ಯವೆಂದು ಹೇಳಿಕೊಂಡಿದ್ದ. ಜೈಲು ಸಿಬ್ಬಂದಿ ಆತನನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಮಂಗಳವಾರ ರಾತ್ರಿ ಆಸ್ಪತ್ರೆಯ ಶೌಚಾಲಯದ ಕಿಟಕಿ ಮುರಿದು ಪರಾರಿಯಾಗಿದ್ದಾನೆ. ಆತನಿಗಾಗಿ ಶೋಧ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.