ADVERTISEMENT

ಕೇಂದ್ರ ಸಶಸ್ತ್ರ ಪೊಲೀಸ್ ಪಡೆ: 5 ವರ್ಷಗಳಲ್ಲಿ 2 ಲಕ್ಷ ಯುವಜನರ ನೇಮಕ

ಪಿಟಿಐ
Published 7 ನವೆಂಬರ್ 2022, 10:51 IST
Last Updated 7 ನವೆಂಬರ್ 2022, 10:51 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ :ನಿರುದ್ಯೋಗಿ ಯುವಜನರಿಗೆ ಉದ್ಯೋಗ ಒದಗಿಸುವ ನರೇಂದ್ರ ಮೋದಿ ಸರ್ಕಾರದ ಪ್ರಯತ್ನಗಳ ಭಾಗವಾಗಿ ಐದು ವರ್ಷಗಳಲ್ಲಿ ಬಿಎಸ್ಎಫ್ ಮತ್ತು ಸಿಆರ್‌ಪಿಯಂತಹ ಆರು ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ ಸುಮಾರು ಎರಡು ಲಕ್ಷ ಜನರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಡಿ ಭದ್ರತಾ ಪಡೆ (ಬಿಎಸ್ಎಫ್), ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್), ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್), ಇಂಡೋ ಟಿಬೆಟಿಯನ್ ಗಡಿ ಪೊಲೀಸ್ (ಐಟಿಬಿಪಿ), ಸಶಸ್ತ್ರ ಸೀಮಾ ಬಲ (ಎಸ್ಎಸ್‌ಬಿ) ಮತ್ತು ಅಸ್ಸಾಂ ರೈಫಲ್ಸ್ (ಎಆರ್) ನಲ್ಲಿಪ್ರಸಕ್ತ ವರ್ಷದ ಜುಲೈ ಅಂತ್ಯದವರೆಗೆ ಇನ್ನೂ 84,000 ಕ್ಕೂ ಹೆಚ್ಚು ಹುದ್ದೆಗಳು ಖಾಲಿ ಇವೆ. ಇವುಗಳನ್ನು ಭರ್ತಿ ಮಾಡಲು ಸಹ ಕ್ರಮ ಕೈಗೊಳ್ಳಲಾಗಿದೆ.

ಕೇಂದ್ರ ಗೃಹ ಸಚಿವಾಲಯದ ಅಂಕಿ ಅಂಶ ಪ್ರಕಾರ, ಐದು ವರ್ಷಗಳಲ್ಲಿ (2017-2021) ಸಿಆರ್‌ಪಿಎಫ್‌ನಲ್ಲಿ ಅತಿ ಹೆಚ್ಚು 1,13,208, ಎಸ್‌ಎಸ್‌ಬಿಯಲ್ಲಿ 29,243 ಮತ್ತು ಬಿಎಸ್‌ಎಫ್‌ ನಿಂದ 17,482 ಯುವಜನರನ್ನು ನೇಮಕ ಮಾಡಿಕೊಳ್ಳಲಾಗಿದೆ.

ADVERTISEMENT

ಐದು ವರ್ಷಗಳಲ್ಲಿ ಸಿಐಎಸ್ಎಫ್ 12,482, ಐಟಿಬಿಪಿ 5,965 ಮತ್ತು ಅಸ್ಸಾಂ ರೈಫಲ್ಸ್ 5,938 ಮಂದಿಯನ್ನು ನೇಮಕ ಮಾಡಿಕೊಂಡಿದೆ.

ಅ.22 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳ 10 ಲಕ್ಷ ಸಿಬ್ಬಂದಿ ನೇಮಕಾತಿ ಅಭಿಯಾನ ಪ್ರಾರಂಭಿಸಿದರು.ಹೊಸದಾಗಿ ಸೇರ್ಪಡೆಗೊಂಡ 75,000 ಮಂದಿಗೆ ಈಗಾಗಲೇ ನೇಮಕಾತಿ ಪತ್ರಗಳನ್ನು ನೀಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.