ADVERTISEMENT

ಮಣಿಪುರ: ಇಬ್ಬರು ಬಂಡುಕೋರರ ಸೆರೆ

ಪಿಟಿಐ
Published 18 ಫೆಬ್ರುವರಿ 2026, 14:25 IST
Last Updated 18 ಫೆಬ್ರುವರಿ 2026, 14:25 IST
.
.   

ಇಂಫಾಲ: ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಇಬ್ಬರು ಬಂಡುಕೋರರನ್ನು ಬಂಧಿಸಲಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ. 

ಪೀಪಲ್‌ ಲಿಬರೇಷನ್‌ ಆರ್ಮಿಯ (ಪಿಎಲ್ಎ) ಲೆಫ್ಟಿನೆಂಟ್‌ ಎಂದು ಘೋಷಿಸಿಕೊಂಡಿದ್ದ ವ್ಯಕ್ತಿಯನ್ನು ಮಂಗಳವಾರ ಬಂಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ನಡೆದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಪಿಎಲ್ಎ ಸದಸ್ಯನನ್ನು ಬಂಧಿಸಲಾಗಿದೆ ಮತ್ತು ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.