ADVERTISEMENT

ಇಬ್ಬರು ಉಗ್ರರ ಹತ್ಯೆ

ಪಿಟಿಐ
Published 24 ಡಿಸೆಂಬರ್ 2020, 14:30 IST
Last Updated 24 ಡಿಸೆಂಬರ್ 2020, 14:30 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆ ಸಿಬ್ಬಂದಿ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದರು.

‘ಉಗ್ರರು ಅಡಗಿರುವ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಜಿಲ್ಲೆಯ ಕ್ರೀರಿ ಪ್ರದೇಶದ ವಾಣಿಗಂ ಪಯೀನ್‌ ಪ್ರದೇಶವನ್ನು ಸುತ್ತುವರಿದ ಭದ್ರತಾ ಪಡೆ ಸಿಬ್ಬಂದಿ ಗುರುವಾರ ಬೆಳಿಗ್ಗೆ ಕಾರ್ಯಾಚರಣೆಗೆ ಇಳಿದಿದ್ದರು. ಸಿಬ್ಬಂದಿ ಮೇಲೆ ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ, ಪ್ರತಿಯಾಗಿ ನಡೆಸಿದ ಗುಂಡಿನ ಚಕಮಕಿಯಲ್ಲಿ ಉಗ್ರರು ಮೃತಪಟ್ಟಿದ್ದಾರೆ. ಉಗ್ರರು ಯಾವ ಸಂಘಟನೆಗೆ ಸೇರಿದವರು ಎನ್ನುವುದರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT