ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಸಾವಿಗೀಡಾಗಿದ್ದಾರೆ.
ಉಗ್ರರ ಬಗ್ಗೆ ಮಾಹಿತಿ ದೊರೆತ ತಕ್ಷಣ ಭದ್ರತಾ ಪಡೆಗಳು ನಗರದ ಹೊರವಲಯದಲ್ಲಿರುವ ಖೊನ್ಹೊಮ್ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ನಡೆಸಿದವು. ಈ ಸಂದರ್ಭದಲ್ಲಿ ಉಗ್ರರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದರು. ಇದಕ್ಕೆ ಪ್ರತಿಯಾಗಿ ಯೋಧರು ಗುಂಡು ಹಾರಿಸಿದಾಗ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಉಗ್ರರ ಗುರುತು ಪತ್ತೆಯಾಗಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.