ಬನಿಹಾಲ್/ಜಮ್ಮು: ಜಮ್ಮುವಿನ ರಂಬನ್ ಜಿಲ್ಲೆಯಲ್ಲಿ ಇಬ್ಬರು ಶಂಕಿತ ಉಗ್ರರನ್ನು ಸೆರೆ ಹಿಡಿಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅವಂತಿಪೋರದ ಶೌಕತ್ ಅಹ್ಮದ್ ಹಾಗೂ ಕುಲ್ಗಾಂನ ತೌಫೀಕ್ ಅಹ್ಮದ್ ಎಂಬಾತನನ್ನು ಗೂಲ್ ಪ್ರದೇಶದಲ್ಲಿ ಬಂಧಿಸಲಾಗಿದೆ. ಇವರ ವಿಚಾರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇನ್ನೊಂದೆಡೆ ಜಮ್ಮು– ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಜೈಶ್ ಎ ಮೊಹಮ್ಮದ್ ಉಗ್ರನನ್ನು ಬಂಧಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.