
ಗಡಿಚಿರೋಲಿ: ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ನಡೆದ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಯ ಸಿಬ್ಬಂದಿಯೊಬ್ಬರು ಶುಕ್ರವಾರ ಹುತಾತ್ಮರಾಗಿದ್ದಾರೆ. ಇಬ್ಬರು ನಕ್ಸಲರೂ ಹತ್ಯೆಯಾಗಿದ್ದಾರೆ
'ನಕ್ಸಲರ ಚಲನವಲನದ ಬಗ್ಗೆ ದೊರೆತ ಮಾಹಿತಿಯ ಆಧಾರದಲ್ಲಿ ಭಮ್ರಗಢದಲ್ಲಿ ಭದ್ರತಾ ಸಿಬ್ಬಂದಿ ಮಂಗಳವಾರ ಕಾರ್ಯಾಚರಣೆ ಆರಂಭಿಸಿದ್ದರು. ಈ ಕಾರ್ಯಾಚರಣೆಯಲ್ಲಿ ಈವರೆಗೆ ಒಟ್ಟು ಮೂವರು ನಕ್ಸಲರನ್ನು ಹತ್ಯೆ ಮಾಡಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪೊಲೀಸ್ ಕಾನ್‌ಸ್ಟೇಬಲ್ ದೀಪಕ್ ಚಿನ್ನ ಮಾಡವಿ(38) ಅವರು ಮೃತಪಟ್ಟಿದ್ದಾರೆ. ಮತ್ತೊಬ್ಬ ಸಿಬ್ಬಂದಿ ಜೋಗ ಮಾಡವಿ ಕೂಡ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನಕ್ಸಲರ ಮೃತದೇಹ ಮತ್ತು ಎರಡು ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಮೃತ ನಕ್ಸಲರ ಗುರುತು ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.