ಬಂಧನ
(ಸಾಂದರ್ಭಿಕ ಚಿತ್ರ)
ಐಜ್ವಾಲ್: ಮಿಜೋರಾಂನ ಸಿಯಾಹಾ ಜಿಲ್ಲೆಯಲ್ಲಿ ಸುಮಾರು ₹1.48 ಕೋಟಿ ಮೌಲ್ಯದ ವಿದೇಶಿ ಕರೆನ್ಸಿ ನೋಟುಗಳನ್ನು ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರು ಮ್ಯಾನ್ಮಾರ್ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಅಸ್ಸಾಂ ರೈಫಲ್ಸ್ ತಿಳಿಸಿದೆ.
ಖಚಿತ ಮಾಹಿತಿ ಮೇರೆಗೆ ಗಡಿಯಾಚೆಗಿನ ಕಳ್ಳಸಾಗಣೆ ಚಟುವಟಿಕೆಗಳ ಕುರಿತು ಅಸ್ಸಾಂ ರೈಫಲ್ಸ್ ಮತ್ತು ಮಿಜೋರಾಂ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.
ಬಂಧಿತ ಆರೋಪಿಗಳಿಂದ ಎರಡು ಮೊಬೈಲ್ ಫೋನ್‌ಗಳು ಮತ್ತು ಬೈಕ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.