ADVERTISEMENT

ಕಾಶ್ಮೀರದಲ್ಲಿ ಎನ್‌ಕೌಂಟರ್: ಇಬ್ಬರು ಉಗ್ರರು ಬಲಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2019, 6:40 IST
Last Updated 13 ಏಪ್ರಿಲ್ 2019, 6:40 IST
   

ಶ್ರೀನಗರ: ಕಾಶ್ಮೀರದ ಶೋಫಿಯಾನ್‌ ಜಿಲ್ಲೆಯ ಗಹಾದ್‌ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್‌ಕೌಂಟರ್ ನಡೆಸಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿದ್ದಾರೆ

ಉಗ್ರರು ಇರುವ ಖಚಿತ ಮಾಹಿತಿಪಡೆದುಎನ್‌ಕೌಂಟರ್‌ ಮಾಡಲಾಗಿದೆ.ಘಟನೆಯಲ್ಲಿ ಉಗ್ರರು ಪ್ರತಿ ದಾಳಿ ನಡೆಸಿದ್ದು ಇಬ್ಬರು ಯೋಧರಿಗೆ ಗಾಯಗಳಾಗಿವೆ. ಹತ್ಯೆಯಾಗಿರುವಉಗ್ರರ ಬಗ್ಗೆ ವಿಚಾರಣೆ ನಡೆಸಲಾಗುತ್ತಿದ್ದು ಅವರುಯಾವ ಸಂಘಟನೆಗೆ ಸೇರಿದವರು ಎಂಬುದು ಇನ್ನು ತಿಳಿದು ಬಂದಿಲ್ಲ ಎಂದು ಸೇನಾ ಅಧಿಕಾರಿಗಳು ಹೇಳಿದ್ದಾರೆ.

ಉಗ್ರರು ಅಡಗಿದ್ದ ಮನೆಯಲ್ಲಿ ಶಸ್ತ್ರಾಸ್ತ್ರಗಳು, ಜೆಲೆಟಿನ್‌ ಹಾಗೂ ಸ್ಫೋಟಕ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರದೇಶದಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಉಗ್ರರು ಇರುವ ಶಂಕೆ ವ್ಯಕ್ತವಾಗಿದ್ದು ಯೋಧರು ಕಾರ್ಯಾಚರಣೆಯನ್ನುಮುಂದುವರೆಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.