ADVERTISEMENT

ಜಮ್ಮು–ಕಾಶ್ಮೀರ: ಇಬ್ಬರು ಉಗ್ರರು ಎನ್‌ಕೌಂಟರ್‌

​ಪ್ರಜಾವಾಣಿ ವಾರ್ತೆ
Published 2 ಆಗಸ್ಟ್ 2025, 13:45 IST
Last Updated 2 ಆಗಸ್ಟ್ 2025, 13:45 IST
<div class="paragraphs"><p> ಇಬ್ಬರು ಉಗ್ರರ ಬಲಿ</p></div>

ಇಬ್ಬರು ಉಗ್ರರ ಬಲಿ

   

ಶ್ರೀನಗರ: ದಕ್ಷಿಣ ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭದ್ರತಾ ಪಡೆಯು ಶನಿವಾರ ಎನ್‌ಕೌಂಟರ್‌ ನಡೆಸಿ, ಇಬ್ಬರು ಉಗ್ರರನ್ನು ಹತ್ಯೆಗೈದಿದೆ. 

ಅಖಲ್‌ ಅರಣ್ಯ ಪ್ರದೇಶದಲ್ಲಿ ಉಗ್ರರು ಇರುವ ಮಾಹಿತಿ ಆಧರಿಸಿ ಭದ್ರತಾ ಪಡೆಯು ಕಾರ್ಯಾಚರಣೆ ನಡೆಸಿದೆ. ಶುಕ್ರವಾರ ಸಂಜೆ ಎರಡೂ ಕಡೆಯವರ ಮಧ್ಯೆ ಪರಸ್ಪರ ಗುಂಡಿನ ಚಕಮಕಿ ನಡೆದಿದೆ. ಶನಿವಾರ ಕಾರ್ಯಾಚರಣೆಯನ್ನು ಮುಂದುವರಿಸಿದ ಭದ್ರತಾ ಪಡೆಯು ಉಗ್ರರನ್ನು ಹತ್ಯೆಗೈದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ADVERTISEMENT

ಮೃತಪಟ್ಟ ಉಗ್ರರ ಗುರುತು ಮತ್ತು ಸಂಘಟನೆಯ ಪತ್ತೆಗೆ ತನಿಖೆ ನಡೆಯುತ್ತಿದ್ದು, ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.