ADVERTISEMENT

ಕಾಶ್ಮೀರದಲ್ಲಿ ಇಬ್ಬರು ಉಗ್ರರ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಮೇ 2023, 3:57 IST
Last Updated 4 ಮೇ 2023, 3:57 IST
ಕಾಶ್ಮೀರದಲ್ಲಿ ಗುಂಡಿನ ಚಕಮಕಿ (ಸಾಂಕೇತಿಕ ಚಿತ್ರ)
ಕಾಶ್ಮೀರದಲ್ಲಿ ಗುಂಡಿನ ಚಕಮಕಿ (ಸಾಂಕೇತಿಕ ಚಿತ್ರ)   

ಶ್ರೀನಗರ: ಭದ್ರತಾ ಪಡೆಗಳು ಕಳೆದ 24 ಗಂಟೆಗಳಲ್ಲಿ ಉಗ್ರರ ವಿರುದ್ಧ ನಡೆಸಿದ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿವೆ.

ಬಾರಮುಲ್ಲಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎರಡು ಕಡೆ ನಡೆಸಿದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹತ್ಯೆ ಮಾಡಿವೆ. 

ಉಗ್ರರು ಇರುವ ಖಚಿತ ಮಾಹಿತಿ ಪಡೆದು ಈ ದಾಳಿ ಮಾಡಲಾಯಿತು ಎಂದು ಸೇನಾ ವಕ್ತಾರರು ಹೇಳಿದ್ದಾರೆ. ಮೃತ ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬುದನ್ನು ಭದ್ರತಾ ಪಡೆಗಳು ಬಹಿರಂಗಪಡಿಸಿಲ್ಲ.

ಉಗ್ರರ ಬಳಿ ಇದ್ದ ಮದ್ದು ಗುಂಡುಗಳು. ರೈಫಲ್‌ಗಳು ಹಾಗೂ ಎ.ಕೆ.47 ಗನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.