ADVERTISEMENT

ಹೈಕೋರ್ಟ್‌ನಲ್ಲಿ ವಾದಿಸಲು ಕನಿಷ್ಠ 2 ವರ್ಷ ಅನುಭವ ಕಡ್ಡಾಯ: ಪ್ರಸ್ತಾವ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2019, 20:00 IST
Last Updated 22 ನವೆಂಬರ್ 2019, 20:00 IST
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್   

ನವದೆಹಲಿ: ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ಗಳಲ್ಲಿ ವಕೀಲಿಕೆ ಮಾಡಲು ಕನಿಷ್ಠ ಎರಡು ವರ್ಷಗಳ ಅನುಭವ ಇರಬೇಕು ಎಂಬ ನಿಯಮ ರೂಪಿಸಬೇಕು ಎಂದು ಭಾರತೀಯ ವಕೀಲರ ಸಂಘವು ಪ್ರಸ್ತಾವನೆ ಮುಂದಿಟ್ಟಿದೆ.

ಕಕ್ಷಿದಾರರೊಬ್ಬರ ಪರವಾಗಿ ಹೈಕೋರ್ಟ್‌ನಲ್ಲಿ ವಾದಿಸಲು ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರಾಗಿ ಎರಡು ವರ್ಷ ಕೆಲಸ ಮಾಡಿದ ಅನುಭವ ಇರಬೇಕು, ಹಾಗೆಯೇ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಲು ಹೈಕೋರ್ಟ್‌ನಲ್ಲಿ ಎರಡು ವರ್ಷ ಕೆಲಸ ಮಾಡಿದ ಅನುಭವ ಹೊಂದಿರಬೇಕು ಎಂದು ಸಂಘವು ಹೇಳಿದೆ.

ವಕೀಲರ ಕಾಯ್ದೆ 1961ರ ಅಡಿಯಲ್ಲಿ ನಿಯಮಗಳಿಗೆ ತಿದ್ದುಪಡಿ ತರುವ ಅಧಿಕಾರವು ಸಂಘಕ್ಕೆ ಇದೆ. ಈ ಬದಲಾವಣೆಗಳು 2020ರ ಮಾರ್ಚ್‌ಗೆ ಜಾರಿಗೆ ಬರಲಿವೆ ಎಂದು ಸಂಘದ ಅಧ್ಯಕ್ಷ ಮನನ್‌ ಕುಮಾರ್‌ ಮಿಶ್ರಾ ಹೇಳಿದ್ದಾರೆ.

ADVERTISEMENT

ಉತ್ತಮ ಕಾನೂನು ವ್ಯವಸ್ಥೆ ರೂಪುಗೊಳ್ಳಬೇಕಿದ್ದರೆ ಸುಪ್ರೀಂ ಕೋರ್ಟ್‌ನಲ್ಲಿ ವಾದಿಸಲು ಬರುವ ವಕೀಲರಿಗೆ ಅರ್ಹತೆ ನಿಗದಿಪಡಿಸಬೇಕು ಎಂದು ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ಅವರು ಇತ್ತೀಚೆಗೆ ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.