ADVERTISEMENT

20 ಮಂದಿಯಲ್ಲಿ ರೂಪಾಂತರ ಕೊರೊನಾ ವೈರಸ್ ಪತ್ತೆ: ಸೋಂಕಿತರ ಸಂಖ್ಯೆ 58ಕ್ಕೆ ಏರಿಕೆ

ಏಜೆನ್ಸೀಸ್
Published 5 ಜನವರಿ 2021, 7:50 IST
Last Updated 5 ಜನವರಿ 2021, 7:50 IST
ಸಾಂದರ್ಭಿಕ ಚಿತ್ರ (ಕೃಪೆ: ರಾಯಿಟರ್ಸ್)
ಸಾಂದರ್ಭಿಕ ಚಿತ್ರ (ಕೃಪೆ: ರಾಯಿಟರ್ಸ್)   

ನವದೆಹಲಿ: ದೇಶದಲ್ಲಿ ಹೊಸದಾಗಿ 20 ಮಂದಿಯಲ್ಲಿ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ. ಇದರೊಂದಿಗೆ ರೂಪಾಂತರ ಕೊರೊನಾ ವೈರಸ್ ತಗುಲಿರುವವರ ಒಟ್ಟು ಸಂಖ್ಯೆ 58ಕ್ಕೆ ಏರಿಕೆಯಾಗಿದೆ.

ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕಣ್ಗಾವಲು ಮತ್ತು ನಿಯಂತ್ರಣ ಕ್ರಮಗಳನ್ನು ಚುರುಕುಗೊಳಿಸುವಂತೆ ಕೇಂದ್ರವು ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ನವದೆಹಲಿಯ ಐಜಿಐಬಿಯಲ್ಲಿ 11, ಬೆಂಗಳೂರಿನ ನಿಮ್ಹಾನ್ಸ್‌ನಲ್ಲಿ 10, ನವದೆಹಲಿಯ ಎನ್‌ಸಿಡಿಸಿಯಲ್ಲಿ 8, ಎನ್‌ಐವಿ–ಪುಣೆಯಲ್ಲಿ 25, ಕೋಲ್ಕತ್ತದ ಎನ್‌ಐಬಿಎಂಜಿಯಲ್ಲಿ 1 ಹಾಗೂ ಹೈದರಾಬಾದ್‌ನ ಸಿಸಿಎಂಬಿಯಲ್ಲಿ 3 ಮಾದರಿಗಳಲ್ಲಿ ರೂಪಾಂತರ ಕೊರೊನಾ ವೈರಸ್ ಪತ್ತೆಯಾಗಿದೆ.

ಮಂಗಳವಾರ ಹೊಸದಾಗಿ ಪತ್ತೆಯಾಗಿರುವ 20 ಪ್ರಕರಣಗಳು ಪುಣೆಯ ಎನ್‌ಐವಿಯಿಂದ ವರದಿಯಾಗಿವೆ.

ಎಲ್ಲ ಸೋಂಕಿತರನ್ನು ಆಯಾ ರಾಜ್ಯ ಸರ್ಕಾರಗಳು ಗೊತ್ತುಪಡಿಸಿದ ಕೇಂದ್ರಗಳಲ್ಲಿ ಪ್ರತ್ಯೇಕ ವಾಸದಲ್ಲಿ ಇರಿಸಲಾಗಿದೆ. ಸೋಂಕಿತರ ನಿಕಟ ಸಂಪರ್ಕಕ್ಕೆ ಬಂದವರನ್ನೂ ಕ್ವಾರಂಟೈನ್‌ ಮಾಡಲಾಗಿದೆ. ಅವರ ಜತೆ ಪ್ರಯಾಣಿಸಿದವರು, ಸಂಪರ್ಕಕ್ಕೆ ಬಂದ ಕುಟುಂಬದವರ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.