ADVERTISEMENT

ಪಶ್ಚಿಮ ಬಂಗಾಳ | ಅಗ್ನಿ ಅವಘಡಕ್ಕೆ 20 ಅಂಗಡಿಗಳು ಭಸ್ಮ

ಶಾರ್ಟ್‌ ಸರ್ಕ್ಯೂಟ್‌ನಿಂದ ಅವಘಡ ಸಂಭವಿಸಿದೆ ಎನ್ನುವ ಶಂಕೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2023, 7:56 IST
Last Updated 2 ಫೆಬ್ರುವರಿ 2023, 7:56 IST
   

ಹೌರಾ: ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದ ಅಗ್ನಿ ಅವಘಡದಲ್ಲಿ ಕನಿಷ್ಠ 20 ಅಂಗಡಿಗಳು ಬೆಂಕಿಗೆ ಆಹುತಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬಗ್ನನ್‌ ಕೇಂದ್ರ ಬಸ್‌ ನಿಲ್ದಾಣದ ಸಮೀಪ ಇರುವ ರಿಜಿಸ್ತ್ರಿ ಗಲ್ಲಿ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದ್ದು, ಯಾವುದೇ ಗಾಯ ಹಾಗೂ ಪ್ರಾಣಹಾನಿಯಾಗಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ನಾಲ್ಕು ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಸತತ ಎರಡು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

ADVERTISEMENT

ಒಂದು ಅಂಗಡಿಯಲ್ಲಿ ಉಂಟಾದ ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಈ ಅವಘಡ ನಡೆದಿದೆ. ಹೆಚ್ಚಿನ ಮಾಹಿತಿ ತನಿಖೆಯಿಂದ ಗೊತ್ತಾಗಬೇಕಿದೆ.

ಅವಘಡದಿಂದ ಸಂಭವಿಸಿರುವ ನಷ್ಟದ ಮೊತ್ತ ಇನ್ನಷ್ಟೇ ತಿಳಿಯಬೇಕಿದೆ. ಒಂದು ಕೋಟಿ ರೂಪಾಯಿಗಿಂತಲೂ ಅಧಿಕ ನಷ್ಟ ಸಂಭವಿಸಿದೆ ಎನ್ನುವುದು ಅಂಗಡಿ ಮಾಲೀಕರ ಅಂದಾಜು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.