ADVERTISEMENT

200 ಕೋಟಿ ರೂ ಮೌಲ್ಯದ ಚಿನ್ನ, ವಜ್ರ ವಶ

​ಪ್ರಜಾವಾಣಿ ವಾರ್ತೆ
Published 2 ಜುಲೈ 2013, 11:03 IST
Last Updated 2 ಜುಲೈ 2013, 11:03 IST

ಮುಂಬೈ (ಪಿಟಿಐ): ರಾಷ್ಟ್ರೀಯ ತನಿಖಾ ದಳ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಹತ್ವದ ಕಾರ್ಯಾಚರಣೆಯಲ್ಲಿ 25 ಲಕ್ಷ ರೂಪಾಯಿ ನಗದು ಹಣ ಸೇರಿದಂತೆ ಸುಮಾರು 200 ಕೋಟಿ ರೂ ಮೌಲ್ಯದ ಚಿನ್ನ, ವಜ್ರದ ಆಭರಣಗಳನ್ನು ಸೋಮವಾರ ತಡ ರಾತ್ರಿ ವಶಪಡಿಸಿಕೊಂಡಿದ್ದಾರೆ.

ನಾಲ್ಕು ದೊಡ್ಡ ಟೆಂಪೋಗಳಲ್ಲಿ ಹಣ, ಚಿನ್ನ ಮತ್ತು ವಜ್ರದ ಆಭರಣಗಳನ್ನು 150 ಬ್ಯಾಗ್‌ಗಳಲ್ಲಿ ಬೇರೆಡೆಗೆ ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಸಂಬಂಧ 40 ಜನರನ್ನು ಬಂಧಿಸಲಾಗಿದ್ದು ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಅದಾಯ ತೆರಿಗೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.