ADVERTISEMENT

ಆಂಧ್ರದ ಅನಕಾಪಲ್ಲಿಯ ಕಾರ್ಖಾನೆಯಲ್ಲಿ ಅನಿಲ ಸೋರಿಕೆ: 200 ಮಹಿಳೆಯರು ಅಸ್ವಸ್ಥ

ಐಎಎನ್ಎಸ್
Published 3 ಜೂನ್ 2022, 14:38 IST
Last Updated 3 ಜೂನ್ 2022, 14:38 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ವಿಶಾಖಪಟ್ಟಣ: ಆಂಧ್ರಪ್ರದೇಶದ ಅನಕಾಪಲ್ಲಿ ಜಿಲ್ಲೆಯಲ್ಲಿರುವ ಪಶುವೈದ್ಯಕೀಯ ಔಷಧಿಗಳ ಕಂಪನಿ ಪೋರಸ್ ಲ್ಯಾಬೊರೇಟರೀಸ್‌ನಲ್ಲಿ ಶುಕ್ರವಾರ ಅನಿಲ ಸೋರಿಕೆಯಾಗಿದ್ದು, ಪಕ್ಕದ ಕಾರ್ಖಾನೆಯ ಸುಮಾರು 200 ಮಹಿಳಾ ಕಾರ್ಮಿಕರು ಅಸ್ವಸ್ಥರಾಗಿದ್ದಾರೆ.

ಅನಕಾಪಲ್ಲಿಯ ಅಚ್ಚುತಪುರಂ ಪ್ರದೇಶದ ವಿಶೇಷ ಆರ್ಥಿಕ ವಲಯ (ಎಸ್‌ಇಜೆಡ್)ದಲ್ಲಿ ಈ ಘಟನೆ ನಡೆದಿದೆ.

ಅನಿಲ ಸೋರಿಕೆಯ ಪರಿಣಾಮವಾಗಿ ‘ಸೀಡ್ಸ್‌ ಅಪೇರಲ್‌ ಇಂಡಿಯಾ’ದ ಮಹಿಳಾ ಸಿಬ್ಬಂದಿಯಲ್ಲಿ ವಾಂತಿ, ತಲೆನೋವು ಮತ್ತು ಕಣ್ಣುಗಳ ಉರಿ ಕಾಣಿಸಿಕೊಂಡಿತ್ತು ಎಂದು ವರದಿಯಾಗಿದೆ.

ADVERTISEMENT

ಅನಿಲ ಸೋರಿಕೆಯಿಂದಾಗಿ ಅಸ್ವಸ್ಥಗೊಂಡಿದ್ದ ಎಲ್ಲ ನೌಕರರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅನಿಲ ಮಾರಣಾಂತಿಕವಾಗಿರಲಿಲ್ಲ ಎಂದು ಅನಕಾಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಗೌತಮಿ ಸಾಲಿ ಹೇಳಿದ್ದಾರೆ.

ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಸಂತ್ರಸ್ತರಿಗೆ ಉತ್ತಮ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಲ್ಲದೆ, ಘಟನೆಯ ತನಿಖೆಗೆ ಆದೇಶಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.