ಮುಂಬೈ (ಪಿಟಿಐ) : ಮಾಲೇಗಾಂವ್ ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಿಜೆಪಿಯ ಮಾಜಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿದ್ದನ್ನು ಪ್ರಶ್ನಿಸಿ, ಸಂತ್ರಸ್ತ ಕುಟುಂಬಗಳು ಹೈಕೋರ್ಟ್ ಮೆಟ್ಟಿಲೇರಿವೆ.
ವಿಶೇಷ ನ್ಯಾಯಾಲಯದ ತೀರ್ಪು ರದ್ದುಗೊಳಿಸುವಂತೆ ಕೋರಿ ನಿಸಾರ್ ಅಹ್ಮದ್ ಸಯ್ಯದ್ ಬಿಲಾಲ್ ಹಾಗೂ ಐದು ಮಂದಿ ಸಂತ್ರಸ್ತರ ಪರವಾಗಿ ವಕೀಲ ಮತೀನ್ ಶೇಖ್ ಅವರು ಅರ್ಜಿ ಸಲ್ಲಿಸಿದ್ದಾರೆ.
‘ಜುಲೈ 31ರಂದು ಎನ್‌ಐಎ ವಿಶೇಷ ನ್ಯಾಯಾಲಯವು ಪ್ರಕಟಿಸಿರುವ ತೀರ್ಪಿನಲ್ಲಿ ಎಲ್ಲ ಏಳು ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿರುವುದು ಕಾನೂನು ಪ್ರಕಾರ ತಪ್ಪಾಗಿದ್ದು, ತೀರ್ಪು ರದ್ದುಗೊಳಿಸಲು ಅರ್ಹವಾಗಿದೆ’ ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.
2008ರ ಸೆಪ್ಟೆಂಬರ್ 29ರಂದು ಮಹಾರಾಷ್ಟ್ರದ ಮಾಲೇಗಾಂವ್ ಪಟ್ಟಣದ ಮಸೀದಿ ಸಮೀಪ ಮೋಟರ್ ಸೈಕಲ್‌ನಲ್ಲಿ ಇಟ್ಟಿದ್ದ ಸ್ಫೋಟಕ ಸಿಡಿದು ಆರು ಮಂದಿ ಮೃತಪಟ್ಟು, 101 ಮಂದಿ ಗಾಯಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.