ADVERTISEMENT

ದೆಹಲಿ ಗಲಭೆ: ಉಮರ್ ಖಾಲಿದ್ ಜಾಮೀನು ಅರ್ಜಿಯ ಆದೇಶ ಮುಂದೂಡಿದ ಕೋರ್ಟ್

ಪಿಟಿಐ
Published 23 ಮಾರ್ಚ್ 2022, 13:42 IST
Last Updated 23 ಮಾರ್ಚ್ 2022, 13:42 IST
ಉಮರ್ ಖಾಲಿದ್
ಉಮರ್ ಖಾಲಿದ್   

ನವದೆಹಲಿ: 2020ರ ಫೆಬ್ರುವರಿಯ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದ ಆರೋಪಿ, ಜವಾಹರ ಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರ ಜಾಮೀನು ಅರ್ಜಿಯ ಆದೇಶವನ್ನು ದೆಹಲಿ ನ್ಯಾಯಾಲಯವು ಗುರುವಾರಕ್ಕೆ ಮುಂದೂಡಿದೆ.

ಬುಧವಾರ ಜಾಮೀನು ಅರ್ಜಿಯ ಆದೇಶವನ್ನು ಪ್ರಕಟಿಸಬೇಕಿದ್ದ ದೆಹಲಿ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಅಮಿತಾಭ್ ರಾವತ್ ಅವರು, ‘ಆದೇಶ ಇನ್ನೂ ಸಿದ್ಧವಾಗಿಲ್ಲ’ ಎಂದು ಹೇಳಿದರು.

ಉಮರ್ ಖಾಲಿದ್ ಮತ್ತು ಪ್ರಾಸಿಕ್ಯೂಷನ್ ಪರ ವಾದ ಮಂಡಿಸಿದ ವಕೀಲರ ವಾದವನ್ನು ಆಲಿಸಿದ್ದ ನ್ಯಾಯಾಲಯವು ಮಾರ್ಚ್ 3ರಂದು ಆದೇಶವನ್ನು ಕಾಯ್ದಿರಿಸಿತ್ತು.

2020ರ ಫೆಬ್ರುವರಿಯಲ್ಲಿ ದೆಹಲಿಯಲ್ಲಿ ನಡೆದಿದ್ದ ಗಲಭೆಯಲ್ಲಿ 53 ಜನರು ಸಾವಿಗೀಡಾಗಿ, 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಗಲಭೆಗೆ ಸಂಬಂಧಿಸಿದಂತೆ ಪಿತೂರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ಉಮರ್ ಖಾಲಿದ್ ಮತ್ತು ಇತರರ ವಿರುದ್ಧ ಯುಎಪಿಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.