ನವದೆಹಲಿ: 2020ರ ದೆಹಲಿ ಗಲಭೆಯ ಪ್ರಕರಣವೊಂದರಲ್ಲಿ ಎಎಪಿಯ ಮಾಜಿ ಕೌನ್ಸಿಲರ್ ತಾಹಿರ್ ಹುಸೇನ್‌ಗೆ ಇಲ್ಲಿನ ನ್ಯಾಯಾಲಯವು ಜಾಮೀನು ನೀಡಿದೆ.
ಹುಸೇನ್ ಈಗಾಗಲೇ ಮೂರು ವರ್ಷ ಬಂಧನದಲ್ಲಿದ್ದಾರೆ. ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿರುವ ಸಾಧ್ಯತೆ ಕಡಿಮೆಯಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ಜಾಮೀನು ಮಂಜೂರು ಮಾಡಿದ ನ್ಯಾಯಾಲಯವು ಹೇಳಿದೆ.
ಕೋಮು ದಳ್ಳುರಿಗೆ ಪಿತೂರಿ ನಡೆಸಿದ್ದು ಸೇರಿದಂತೆ ಇದಕ್ಕೆ ಧನ ಸಹಾಯದ ನಂಟಿರುವ ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆಯಡಿ ಹುಸೇನ್ ಆರೋಪಿಯಾಗಿರುವುದರಿಂದ ಬಂಧನದಲ್ಲೇ ಮುಂದುವರಿಯಲಿದ್ದಾರೆ.
2020ರ ಫೆ. 25ರಂದು ನಡೆದ ಗಲಭೆ ಸಂದರ್ಭ ಜನಸಮೂಹವು ಅಂಗಡಿಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿತ್ತು. ಖಜೂರೀ ಖಾಸ್ ಪೊಲೀಸ್ ಠಾಣೆಯಲ್ಲಿ ಇದಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಪುಲಸ್ತ್ಯ ಪ್ರಮಾಚಲ ಅವರು ಹುಸೇನ್ ಜಾಮೀನು ಅರ್ಜಿಯ ವಿಚಾರಣೆ ನಡೆಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.