ಉಮರ್ ಖಾಲಿದ್
ನವದೆಹಲಿ: 2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ಏಳು ದಿನಗಳ ಮಧ್ಯಂತರ ಜಾಮೀನನ್ನು ದೆಹಲಿ ನ್ಯಾಯಾಲಯ ಬುಧವಾರ ಮಂಜೂರು ಮಾಡಿದೆ.
ಕುಟುಂಬದ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಲು ಖಾಲಿದ್‌ಗೆ ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ ಎಂದು ಲೈವ್ ಲಾ ವರದಿ ಮಾಡಿದೆ.
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ 2020ರಲ್ಲಿ ದೆಹಲಿಯಲ್ಲಿ ಪ್ರತಿಭಟನೆ ಹಮ್ಮಿಕೊಂಡಿದ್ದ ವೇಳೆ ಗಲಭೆ ನಡೆದಿತ್ತು. ಆ ಗಲಭೆಗೆ ಸಂಚು ರೂಪಿಸಿದ ಆರೋಪದ ಮೇಲೆ ಉಮರ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿ ಪ್ರಕರಣ ದಾಖಲಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.