ADVERTISEMENT

ಪಾಕಿಸ್ತಾನದಿಂದ 2,050 ಬಾರಿ ಕದನ ವಿರಾಮ ಉಲ್ಲಂಘನೆ

ಪಿಟಿಐ
Published 15 ಸೆಪ್ಟೆಂಬರ್ 2019, 20:36 IST
Last Updated 15 ಸೆಪ್ಟೆಂಬರ್ 2019, 20:36 IST
   

ನವದೆಹಲಿ: ‘ಪ್ರಸಕ್ತ ಸಾಲಿನಲ್ಲಿ ಪಾಕಿಸ್ತಾನವು 2,050 ಬಾರಿ ಕದನ ವಿರಾಮವನ್ನು ಉಲ್ಲಂಘಿಸಿ ಭಾರತದ ವಿರುದ್ಧ ಅಪ್ರಚೋದಿತ ದಾಳಿ ನಡೆಸಿದೆ. ಇದರಲ್ಲಿ 21 ಮಂದಿ ಭಾರತೀಯರು ಹತರಾಗಿದ್ದಾರೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಭಾನುವಾರ ತಿಳಿಸಿದೆ.

‘ಕದನ ವಿರಾಮ ಉಲ್ಲಂಘನೆ, ಭಯೋತ್ಪಾದಕರಿಗೆ ಬೆಂಬಲ ನೀಡುವುದು ಮತ್ತು ಭಯೋತ್ಪಾದಕರ ನುಸುಳುವಿಕೆಯ ಬಗ್ಗೆ ನಮ್ಮ ಆತಂಕವನ್ನು ಪಾಕಿಸ್ತಾನದ ಮುಂದೆ ವ್ಯಕ್ತಪಡಿಸಿದ್ದೇವೆ. 2003ರ ಕದನ ವಿರಾಮ ಒಪ್ಪಂದಕ್ಕೆ ಬದ್ಧರಾಗಿ, ಶಾಂತಿ ಕಾಪಾಡಲು ಸಹಕರಿಸುವಂತೆ ಹಲವು ಬಾರಿ ಪಾಕಿಸ್ತಾನಕ್ಕೆ ಮನವಿ ಮಾಡಿದ್ದೇವೆ. ಭಾರತೀಯ ಸೇನೆಯು ಹೆಚ್ಚು ತಾಳ್ಮೆ ವಹಿಸಿದೆ. ಅಪ್ರಚೋದಿತ ದಾಳಿ ಮತ್ತು ಗಡಿಯಾಚೆಯಿಂದ ಭಯೋತ್ಪಾದಕರ ನುಸುಳುವಿಕೆಯ ಪ್ರಯತ್ನಗಳಿಗೆ ಮಾತ್ರ ಪ್ರತ್ಯುತ್ತರ ನೀಡಿದ್ದೇವೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದವಕ್ತಾರ ರವೀಶ್‌ ಕುಮಾರ್‌ ಹೇಳಿದ್ದಾರೆ.

‘ಕಾಶ್ಮೀರದಲ್ಲಿ ಮಾನವಹಕ್ಕುಗಳ ಉಲ್ಲಂಘನೆಯಾಗುತ್ತಿದೆ’ ಎಂದು ಪಾಕಿಸ್ತಾನವು ವಿಶ್ವಸಂಸ್ಥೆಯ ಮಾನವಹಕ್ಕುಗಳ ಮಂಡಳಿಯ ಸಭೆಯಲ್ಲಿ ಆರೋಪಗಳನ್ನು ಮಾಡಿದ ಬೆನ್ನಲ್ಲೇ ಭಾರತವು ಈ ಅಂಕಿಅಂಶಗಳನ್ನು ನೀಡಿದೆ.

ADVERTISEMENT

ಯುದ್ಧ: ಇಮ್ರಾನ್‌ ಎಚ್ಚರಿಕೆ

ಇಸ್ಲಾಮಾಬಾದ್‌: ‘ಜಮ್ಮು ಕಾಶ್ಮೀರ ವಿಚಾರವಾಗಿ ಭಾರತದ ಜೊತೆ ಮಾತುಕತೆ ನಡೆಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌ ಪುನರುಚ್ಚರಿಸಿದ್ದಾರೆ.

ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಈ ಅಭಿಪ್ರಾಯ ವ್ಯಕ್ತಪಡಿಸಿದ ಅವರು, ‘ಕಾಶ್ಮೀರ ವಿಚಾರವಾಗಿ ಭಾರತದೊಂದಿಗೆ ಸಾಂಪ್ರದಾಯಿಕ ಯುದ್ಧ ನಡೆಯುವ ಸಾಧ್ಯತೆಯೂ ಇದೆ. ಅದರ ಪರಿಣಾಮ ಇತರ ರಾಷ್ಟ್ರಗಳ ಮೇಲೂ ಆಗುವುದು ಖಚಿತ. ಆದ್ದರಿಂದ ಅಂತರರಾಷ್ಟ್ರೀಯ ವೇದಿಕೆಗಳು ಶೀಘ್ರದಲ್ಲೇ ಭಾರತದ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.