ADVERTISEMENT

ಭಯೋತ್ಪಾದನೆ: 10 ಮಂದಿ ಶಂಕಿತರ ವಿರುದ್ಧ ಚಾರ್ಚ್‌ಶೀಟ್‌

​ಪ್ರಜಾವಾಣಿ ವಾರ್ತೆ
Published 21 ಜೂನ್ 2019, 19:57 IST
Last Updated 21 ಜೂನ್ 2019, 19:57 IST

ನವದೆಹಲಿ: ದೆಹಲಿ ಹಾಗೂ ಉತ್ತರಪ್ರದೇಶದ ಅಮ್ರೋಹಾದಲ್ಲಿ ಕಂಡುಬಂದ ಭಯೋತ್ಪಾದನಾ ಚಟುವಟಿಕೆಗಳಲ್ಲಿ ಶಾಮೀಲಾಗಿರುವ ಶಂಕೆ ಮೇಲೆ 10 ಜನರ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಶುಕ್ರವಾರ ದೆಹಲಿ ಕೋರ್ಟ್‌ಗೆ ಚಾರ್ಜ್‌ಶೀಟ್‌ ಸಲ್ಲಿಸಿದೆ.

ಅಮ್ರೋಹಾದಲ್ಲಿರುವ ಧಾರ್ಮಿಕ ಶಿಕ್ಷಣ ಕೇಂದ್ರದ ಮುಖ್ಯಸ್ಥ ಮುಫ್ತಿ ಮೊಹಮ್ಮದ್‌ ಸುಹೇಲ್‌ ವಿರುದ್ಧ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ಅಜಯ್‌ಕುಮಾರ್‌ ಅವರು ಜುಲೈ 4ಕ್ಕೆ ವಿಚಾರಣೆ ಮುಂದೂಡಿದರು.

ಐಎಸ್‌ಐಎಸ್‌ನಿಂದ ಪ್ರೇರಿತಗೊಂಡಿದ್ದ ಸುಹೇಲ್‌, ದೆಹಲಿ ನಿವಾಸಿ ಮೊಹಮ್ಮದ್‌ ಫೈಜ್‌ ನೆರವಿನಿಂದ ಹರ್ಕತ್‌–ಉಲ್‌–ಹರ್ಬ್‌–ಎ–ಇಸ್ಲಾಂ ಎಂಬ ಸಂಘಟನೆ ಸ್ಥಾಪಿಸಿ, ಭಯೋತ್ಪಾದನಾ ಚಟುವಟಿಕೆಯಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿದ್ದಾನೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.