ನವದೆಹಲಿ: ಉತ್ತರ ಭಾರತ ಮತ್ತು ದೇಶದ ಪೂರ್ವ ಭಾಗದಲ್ಲಿ ಇಂದು (ಸೋಮವಾರ) ತೀವ್ರ ಚಳಿ ಹಾಗೂ ದಟ್ಟ ಮಂಜು ಮುಸುಕಿದ ವಾತಾವರಣವಿದ್ದ ಕಾರಣ ದೆಹಲಿ ಸೇರಿದಂತೆ ಹಲವೆಡೆ 21 ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶೀತಗಾಳಿ ಬೀಸುತ್ತಿರುವ ಕಾರಣ ಜನರು ಮನೆಯೊಳಗೆ ಉಳಿದು ಬೆಚ್ಚಗಿರಲು ಹೀಟರ್ ಮತ್ತು ಬಿಸಿ ಪಾನೀಯಗಳ ಮೊರೆ ಹೋಗಿದ್ದಾರೆ.
ದೆಹಲಿಯಲ್ಲಿ ಕನಿಷ್ಠ ಉಷ್ಣಾಂಶವು 6 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದು, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡಕ್ಕಿಂತಲೂ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಜಮ್ಮು ಮತ್ತು ಕಾಶ್ಮೀರ, ರಾಜಸ್ತಾನ, ಪಂಜಾಬ್, ಹರಿಯಾಣ ರಾಜ್ಯಗಳ ಹಲವು ಜಿಲ್ಲೆಗಳಲ್ಲಿ ತೀವ್ರ ಶೀತ ಗಾಳಿ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.