ADVERTISEMENT

ದೇಶದ ಅತಿ ಕಿರಿಯ ವಯಸ್ಸಿನ ಮೇಯರ್‌ ಆಗಿ ಆಯ್ಕೆಯಾದ 21 ವರ್ಷದ ಆರ್ಯ ರಾಜೇಂದ್ರನ್‌

ಏಜೆನ್ಸೀಸ್
Published 25 ಡಿಸೆಂಬರ್ 2020, 11:01 IST
Last Updated 25 ಡಿಸೆಂಬರ್ 2020, 11:01 IST
ಆರ್ಯ ರಾಜೇಂದ್ರನ್‌ - ಟ್ವಿಟರ್‌ ಚಿತ್ರ
ಆರ್ಯ ರಾಜೇಂದ್ರನ್‌ - ಟ್ವಿಟರ್‌ ಚಿತ್ರ   

ತಿರುವನಂತಪುರಂ: ಕೇರಳ ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆಯ ಮೇಯರ್‌ ಆಗಿ 21 ವರ್ಷದ ಆರ್ಯ ರಾಜೇಂದ್ರನ್‌ ಆಯ್ಕೆಯಾಗಿದ್ದಾರೆ. ಆ ಮೂಲಕ ದೇಶದ ಅತಿ ಕಿರಿಯ ವಯಸ್ಸಿನ ಮೇಯರ್‌ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಇತ್ತೀಚೆಗೆ ತಿರುವನಂತಪುರಂ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಸಿಪಿಎಂ ಪಕ್ಷದಿಂದ ಆರ್ಯ ರಾಜೇಂದ್ರನ್‌ ಸ್ಪರ್ಧಿಸಿದ್ದರು.

ಮುಡವನ್‌ಮುಗಳ್ ವಾರ್ಡ್‌ನಿಂದ ಆಯ್ಕೆಯಾಗಿದ್ದ ಆರ್ಯ ರಾಜೇಂದ್ರನ್‌ ಹೆಸರನ್ನು ಸಿಪಿಎಂ ಜಿಲ್ಲಾ ಕಾರ್ಯಾಲಯವು ತಿರುವನಂತಪುರಂ ಮಹಾನಗರ ಪಾಲಿಕೆಯ ಮೇಯರ್‌ ಸ್ಥಾನಕ್ಕೆ ಶಿಫಾರಸು ಮಾಡಿತ್ತು. ಇದೀಗ 21 ವರ್ಷದ ಆರ್ಯ ರಾಜೇಂದ್ರನ್‌ ಅವರು ಕೇರಳ ರಾಜಧಾನಿಯ ಮೇಯರ್‌ ಆಗಿ ಆಯ್ಕೆ ಆಗುವ ಮೂಲಕ ದೇಶದ ಅತಿ ಕಿರಿಯ ವಯಸ್ಸಿನ ಮೇಯರ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ADVERTISEMENT

ಆರ್ಯ ಅವರ ತಂದೆ ಎಲೆಕ್ಟ್ರಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ತಾಯಿ ಗೃಹಿಣಿಯಾಗಿದ್ದಾರೆ.

ಎಲ್‌ಬಿಎಸ್‌ ಎಂಜಿನಿಯರಿಂಗ್‌ ಕಾಲೇಜ್‌ನಲ್ಲಿ ವಿದ್ಯಾರ್ಥಿನಿಯಾಗಿರುವ ಆರ್ಯ ಅವರು ಸ್ಟೂಡೆಂಟ್‌ ಫೆಡರೇಶನ್ ಆಫ್ ಇಂಡಿಯಾದ ರಾಜ್ಯ ಸಮಿತಿ ಸದಸ್ಯೆಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.