ಬಂಧನ
(ಸಾಂದರ್ಭಿಕ ಚಿತ್ರ)
ಇಂಫಾಲ: ಮಣಿಪುರದ ಚುರಾಚಂದ್‌ಪುರ ಜಿಲ್ಲೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 21 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶುಕ್ರವಾರ ಥನ್ಲೋನ್ ಉಪ ವಿಭಾಗದ ಕಾಡಿನಲ್ಲಿ ಬಾಲಕಿಯ ಶವ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.
‘ಹುಡುಗಿ ಉರುವಲು ಸಂಗ್ರಹಿಸಲು ಕಾಡಿಗೆ ಹೋಗಿದ್ದಳು. ಅವಳು ಹಿಂತಿರುಗದಿದ್ದಾಗ, ಅವಳ ತಂದೆ ಆಕೆಯನ್ನು ಹುಡುಕಿಕೊಂಡು ಕಾಡಿಗೆ ಹೋಗಿದ್ದಾರೆ. ಹರಿದ ಬಟ್ಟೆ ಮತ್ತು ಗಾಯದ ಗುರುತುಗಳೊಂದಿಗೆ ಬಾಲಕಿ ಶವ ಪತ್ತೆಯಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಚುರಾಚಂದ್‌ಪುರ ಜಿಲ್ಲೆಯಲ್ಲಿ ಕಳೆದೊಂದು ತಿಂಗಳೊಳಗೆ ಬಾಲಕಿಯರ ಮೇಲೆ ನಡೆದ ಮೂರನೇ ಅತ್ಯಾಚಾರ ಪ್ರಕರಣ ಇದಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.