ನವದೆಹಲಿ: ಯುದ್ಧ ಪೀಡಿತ ಉಕ್ರೇನ್‌ನಿಂದ ರೊಮೇನಿಯಾಕ್ಕೆ ಸ್ಥಳಾಂತರಗೊಂಡಿದ್ದ ಭಾರತೀಯ ಪ್ರಜೆಗಳು ಅಲ್ಲಿಂದ ಮುಂಬೈಗೆ ವಿಮಾನದಲ್ಲಿ ಹೊರಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಹೇಳಿದ್ದಾರೆ.
ಅವರೆಲ್ಲರೂ ವಿಮಾನದ ಮೂಲಕ ಪ್ರಯಾಣ ಕೈಗೊಂಡಿರುವ ಚಿತ್ರಗಳನ್ನು ಜೈಶಂಕರ್ ಸಾಮಾಜಿಕ ಮಾಧ್ಯಮಗಳಲ್ಲಿ ಶನಿವಾರ ಹಂಚಿಕೊಂಡಿದ್ದಾರೆ.
‘ನಮ್ಮ ತಂಡಗಳು ಹಗಲಿರುಳೂ ಕೆಲಸ ಮಾಡುತ್ತಿವೆ. ಭಾರತೀಯರನ್ನು ಸ್ಥಳಾಂತರಿಸುವ ಕಾರ್ಯ ಪ್ರಗತಿಯಲ್ಲಿದೆ. ನಾನು ವೈಯಕ್ತಿಕವಾಗಿ ಮೇಲ್ವಿಚಾರಣೆ ಮಾಡುತ್ತಿದ್ದೇನೆ‘ ಎಂದು ಅವರು ಹೇಳಿದ್ದಾರೆ.
219 ಮಂದಿಯನ್ನು ಹೊತ್ತ ವಿಮಾನವು ಸಂಜೆ 4 ಗಂಟೆಗೆ ಭಾರತಕ್ಕೆ ಬಂದಿಳಿಯಲಿದೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.