ADVERTISEMENT

ರಸ್ತೆ ಗುಂಡಿ ತಪ್ಪಿಸಲು ಹೋಗಿ ಟ್ರಕ್‌ನಡಿ ಬಿದ್ದು ಯುವತಿ ಮೃತ್ಯು

ಸಹೋದರನನ್ನು ನೀಟ್ ತರಬೇತಿ ಕೇಂದ್ರಕ್ಕೆ ಕರೆದುಕೊಂಡು ಹೋಗುವ ವೇಳೆ ಘಟನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಜನವರಿ 2023, 7:04 IST
Last Updated 4 ಜನವರಿ 2023, 7:04 IST
ಮೃತ ಶೋಭನಾ
ಮೃತ ಶೋಭನಾ   

ಚೆನ್ನೈ: ರಸ್ತೆ ಗುಂಡಿಯನ್ನು ತಪ್ಪಿಸಲು ಹೋಗಿ ಯುವತಿಯೊಬ್ಬರು ಲಾರಿ ಅಡಿಗೆ ಬಿದ್ದು ಸಾವಿಗೀಡಾದ ದಾರುಣ ಘಟನೆ ಚೆನ್ನೈನಲ್ಲಿ ನಡೆದಿದೆ.

22 ವರ್ಷದ ಶೋಭನಾ ಎಂಬವರೇ ಮೃತ ದುರ್ದೈವಿ.

ಖಾಸಗಿ ಕಂಪನಿಯೊಂದರಲ್ಲಿ ಎಂಜಿನಿಯರ್‌ ಆಗಿರುವ ಶೋಭನಾ, ತನ್ನ ಸಹೋದರನನ್ನು ನೀಟ್‌ ತರಬೇತಿ ತರಗತಿಗೆ ಕರೆದುಕೊಂಡು ಹೋಗುವಾಗ ಘಟನೆ ನಡೆದಿದೆ. ಅಪಘಾತದಲ್ಲಿ ಸಹೋದರನಿಗೂ ಕೂಡ ಗಾಯಗಳಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ADVERTISEMENT

ಶೋಭನಾ ಹಾಗೂ ಅವರ ಸಹೋದರ ಇಬ್ಬರೂ ಕೂಡ ಹೆಲ್ಮೆಟ್ ಧರಿಸಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಅಫಘಾತ ನಡೆದ ಕೂಡಲೇ ಟ್ರಕ್‌ ಚಾಲಕ ಪರಾರಿಯಾಗಿದ್ದು, ಬಳಿಕ ಆತನನ್ನು ಬಂಧಿಸಲಾಗಿದೆ. ಆತನ ಹೆಸರು ಮೋಹನ್‌ ಎಂದು ಗೊತ್ತಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.