ADVERTISEMENT

‘ಜಮ್ಮು– ಕಾಶ್ಮೀರ: ಯಾರೊಬ್ಬರೂ ಗೃಹ ಬಂಧನದಲ್ಲಿಲ್ಲ’

ಪಿಟಿಐ
Published 16 ಸೆಪ್ಟೆಂಬರ್ 2020, 2:01 IST
Last Updated 16 ಸೆಪ್ಟೆಂಬರ್ 2020, 2:01 IST
ಜಿ. ಕಿಶನ್‌ ರೆಡ್ಡಿ
ಜಿ. ಕಿಶನ್‌ ರೆಡ್ಡಿ   

ನವದೆಹಲಿ (ಪಿಟಿಐ): ಜಮ್ಮು ಮತ್ತು ಕಾಶ್ಮೀರದ ಯಾರೊಬ್ಬರನ್ನು ಗೃಹ ಬಂಧನದಲ್ಲಿ ಇರಿಸಿಲ್ಲ ಎಂದುಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಜಿ.ಕಿಶನ್‌ ರೆಡ್ಡಿ ಮಂಗಳವಾರ ಲೋಕಸಭೆಗೆ ತಿಳಿಸಿದ್ದಾರೆ.

370ನೇ ವಿಧಿ ರದ್ದತಿ ಮತ್ತು ಕೇಂದ್ರಾಡಳಿತ ಪ್ರದೇಶವಾದ ನಂತರ ಕಾನೂನು ಸುವ್ಯವಸ್ಥೆ ಕಾಪಾಡಲು ಕೆಲವು ವ್ಯಕ್ತಿಗಳನ್ನು ಬಂಧಿಸಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಸರ್ಕಾರ ತಿಳಿಸಿದೆ. ಸೆ.11ರವರೆಗೆ 223 ಮಂದಿಯನ್ನು ಸೆರೆಯಲ್ಲಿಡಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿದ್ದಾರೆ.

ಆ.5, 2019ರಲ್ಲಿ ರಾಜ್ಯವನ್ನು ವಿಭಜಿಸಿದ ನಂತರ ಭಯೋತ್ಪಾದಕ ಕೃತ್ಯಗಳು ಗಣನೀಯವಾಗಿ ಕಡಿಮೆಯಾಗಿವೆ. ಜೂನ್‌ 29, 2018ರಿಂದ ಆ.4, 2018ರವರೆಗೆ 455 ಭಯೋತ್ಪಾದಕ ಕೃತ್ಯಗಳು ನಡೆದಿದ್ದರೆ, 2019ರಿಂದ ಇದೇ ಸೆ.9ರವರೆಗೆ 211 ಘಟನೆಗಳು ಸಂಭವಿಸಿವೆ ಎಂದು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.