ADVERTISEMENT

ಏಕರೂಪ ನಾಗರಿಕ ಸಂಹಿತೆ 22ನೇ ಕಾನೂನು ಆಯೋಗದ ತೆಕ್ಕೆಗೆ: ಕಿರಣ್ ರಿಜಿಜು

ಪಿಟಿಐ
Published 4 ಫೆಬ್ರುವರಿ 2022, 10:52 IST
Last Updated 4 ಫೆಬ್ರುವರಿ 2022, 10:52 IST
ಕಿರಣ್ ರಿಜಿಜು
ಕಿರಣ್ ರಿಜಿಜು   

ನವದೆಹಲಿ: ‘ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೊಸ ಕಾನೂನು ಆಯೋಗವು ಕೈಗೆತ್ತಿಕೊಳ್ಳಲಿದೆ’ ಎಂದು ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಬಿಜೆಪಿ ಸಂಸದರಿಗೆ ಮಾಹಿತಿ ನೀಡಿದ್ದಾರೆ.

ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಮಾತನಾಡಿದ್ದ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು, ಏಕರೂಪ ನಾಗರಿಕ ಸಂಹಿತೆಯ ವಿಷಯವನ್ನು ಪ್ರಸ್ತಾಪಿಸಿದ್ದರು.

ದುಬೆ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿರುವ ರಿಜಿಜು, ‘ವಿಷಯದ ಪ್ರಾಮುಖ್ಯತೆ, ಅದು ಒಳಗೊಂಡಿರುವ ಸೂಕ್ಷ್ಮತೆ ಮತ್ತು ವಿವಿಧ ಸಮುದಾಯಗಳನ್ನು ನಿಯಂತ್ರಿಸುವ ವಿವಿಧ ವೈಯಕ್ತಿಕ ಕಾನೂನುಗಳ ನಿಬಂಧನೆಗಳ ಆಳವಾದ ಅಧ್ಯಯನದ ಅಗತ್ಯವಿದೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಹೊಸ ಕಾನೂನು ಆಯೋಗಕ್ಕೆ ಈ ವಿಷಯವನ್ನು ವಹಿಸಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

‘ಏಕರೂಪ ನಾಗರಿಕ ಸಂಹಿತೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಶೀಲಿಸಿ ಶಿಫಾರಸುಗಳನ್ನು ಮಾಡುವ ಪ್ರಸ್ತಾವನೆಯನ್ನು 21ನೇ ಕಾನೂನು ಆಯೋಗಕ್ಕೆ ರವಾನಿಸಲಾಗಿತ್ತು. ಆದರೆ, ಹಿಂದಿನ ಕಾನೂನು ಆಯೋಗದ ಅವಧಿಯು 2018ರ ಆಗಸ್ಟ್ 31ಕ್ಕೆ ಮುಕ್ತಾಯವಾಗಿದೆ. ಹಾಗಾಗಿ, 22ನೇ ಕಾನೂನು ಆಯೋಗವು ಏಕರೂಪ ನಾಗರಿಕ ಸಂಹಿತೆಯನ್ನು ಕೈಗೆತ್ತಿಕೊಳ್ಳಲಿದೆ’ ಎಂದು ದುಬೆ ಅವರಿಗೆ ನೀಡಿರುವ ಲಿಖಿತ ಉತ್ತರದಲ್ಲಿ ರಿಜಿಜು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.