ADVERTISEMENT

ಕೊರೊನಾ: ಮಹಾರಾಷ್ಟ್ರದಲ್ಲಿ ಒಂದೇ ದಿನ 2347 ಪ್ರಕರಣ, 63 ಸಾವು

ಏಜೆನ್ಸೀಸ್
Published 17 ಮೇ 2020, 15:50 IST
Last Updated 17 ಮೇ 2020, 15:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾಗುತ್ತಿದೆ. ಒಂದೇ ದಿನ 2,347 ಜನರಿಗೆ ಸೋಂಕು ತಗುಲಿದ್ದು, 63 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಇದರೊಂದಿಗೆ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 33,053ಕ್ಕೆ ಏರಿಕೆಯಾಗಿದೆ. ಈವರೆಗೆ 1,198 ಜನ ಮೃತಪಟ್ಟಿದ್ದಾರೆ. ಭಾನುವಾರ 600 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಒಟ್ಟಾರೆಯಾಗಿ ಈವರೆಗೆ 7,688 ಜನ ಚೇತರಿಸಿಕೊಂಡಿದ್ದಾರೆ.

ದೇಶದಾದ್ಯಂತ ಒಂದೇ ದಿನ4,987 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ಬೆಳಿಗ್ಗೆಯ ಪ್ರಕಟಣೆಯಲ್ಲಿ ತಿಳಿಸಿತ್ತು. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 90,927ತಲುಪಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.