ADVERTISEMENT

ಮಹಾರಾಷ್ಟ್ರ: 10 ತಿಂಗಳಲ್ಲಿ 2 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ

ಪಿಟಿಐ
Published 14 ಡಿಸೆಂಬರ್ 2023, 7:57 IST
Last Updated 14 ಡಿಸೆಂಬರ್ 2023, 7:57 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ನಾಗ್ಪುರ: ಮಹಾರಾಷ್ಟ್ರದಲ್ಲಿ ಈ ವರ್ಷದ ಜನವರಿಯಿಂದ ಅಕ್ಟೋಬರ್ ನಡುವೆ 2 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಸಚಿವ ಅನಿಲ್ ಭೈದಾಸ್ ಪಾಟೀಲ್ ಗುರುವಾರ ರಾಜ್ಯ ವಿಧಾನಸಭೆಗೆ ತಿಳಿಸಿದರು.

ಕಾಂಗ್ರೆಸ್ ಶಾಸಕ ಕುನಾಲ್ ಪಾಟೀಲ್ ಕೇಳಿದ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ. ‘ಈ ವರ್ಷದ ಜನವರಿಯಿಂದ ಅಕ್ಟೋಬರ್‌ವರೆಗೆ(10 ತಿಂಗಳಲ್ಲಿ) 2,366 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ' ಎಂದು ಮಹಾರಾಷ್ಟ್ರ ಸರ್ಕಾರಕ್ಕೆ ವರದಿ ಬಂದಿದೆ' ಎಂದು ಸಚಿವರು ಮಾಹಿತಿ ನೀಡಿದರು.

ADVERTISEMENT

ವರದಿಯ ಪ್ರಕಾರ, ‘ಅಮರಾವತಿ ಕಂದಾಯ ವಿಭಾಗದಲ್ಲಿ ಅತಿ ಹೆಚ್ಚು ಅಂದರೆ 951 ಮಂದಿ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಛತ್ರಪತಿ ಸಂಭಾಜಿನಗರ ವಿಭಾಗದಲ್ಲಿ 877, ನಾಗ್ಪುರ ವಿಭಾಗದಲ್ಲಿ 257 , ನಾಸಿಕ್ ವಿಭಾಗದಲ್ಲಿ 254 ಹಾಗೂ ಪುಣೆ ವಿಭಾಗದಲ್ಲಿ 27 ರೈತರು ನೇಣಿಗೆ ಶರಣಾಗಿದ್ದಾರೆ ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.