ರಾಮೇಶ್ವರಂ(ಪಿಟಿಐ): ಭಾರತ ಮತ್ತು ಶ್ರೀಲಂಕಾದ ನಡುವೆ ಇರುವ ಮೀನುಗಾರರ ಸಮಸ್ಯೆಯನ್ನು ಇತ್ಯರ್ಥಗೊಳಿಸಬೇಕು ಎಂದು ಚರ್ಚೆ ನಡೆಯುತ್ತಿರುವ ವೇಳೆ ಶ್ರೀಲಂಕಾದ ನ್ಯಾಯಾಲಯವೊಂದು 116 ಮೀನುಗಾರರನ್ನು ಬಿಡುಗಡೆ ಮಾಡಿದ ಒಂದು ದಿನದ ನಂತರ ಶ್ರೀಲಂಕಾದ ಮನ್ನಾರ್ ನ್ಯಾಯಾಲಯ ಭಾರತದ 24 ಮೀನುಗಾರರನ್ನು ಗುರುವಾರ ಬಿಡುಗಡೆ ಮಾಡಿದೆ.
ವಿಶ್ವ ಕಡಲ ಗಡಿಯನ್ನು ಅಕ್ರಮವಾಗಿ ದಾಟಿದ ಆರೋಪದ ಮೇಲೆ ಶ್ರೀಲಂಕಾ ನೌಕಾ ಸೇನೆಯವರು ಮೀನುಗಾರರನ್ನು ಬಂಧಿಸಿದ್ದರು.
‘ಶ್ರೀಲಂಕಾದ ಜೈಲುಗಳಲ್ಲಿ ಬಂಧಿತವಾಗಿರುವ 32 ಭಾರತೀಯ ಮೀನುಗಾರರನ್ನು ಬಿಡುಗಡೆ ಮಾಡಬೇಕಿದೆ’ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.