ADVERTISEMENT

Mahakumbh 2025 | ಮಹಾ ಕುಂಭಮೇಳ: 'ಸಂಗಮ'ದಲ್ಲಿ ಮಿಂದೆದ್ದ 25 ಲಕ್ಷ ಜನರು

ಪಿಟಿಐ
Published 12 ಜನವರಿ 2025, 2:13 IST
Last Updated 12 ಜನವರಿ 2025, 2:13 IST
<div class="paragraphs"><p>ಕುಂಭಮೇಳ ( ಸಂಗ್ರಹ ಚಿತ್ರ)</p></div>

ಕುಂಭಮೇಳ ( ಸಂಗ್ರಹ ಚಿತ್ರ)

   

ಲಖನೌ: ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳವು ನಾಳೆಯಿಂದ ಪ್ರಾರಂಭವಾಗಲಿದೆ. ಸುಮಾರು 25 ಲಕ್ಷ ಜನರು ನದಿಗಳ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಾ ಕುಂಭಮೇಳ ಪ್ರಾರಂಭವಾಗಲು ಎರಡು ದಿನಗಳು ಬಾಕಿ ಇರುವಾಗಲೇ ಭಕ್ತಾದಿಗಳು ಸಂಗಮದಲ್ಲಿ ಸ್ನಾನ ಮಾಡಿದ್ದಾರೆ. ಮುಂದಿನ ಪುಣ್ಯ ಸ್ನಾನ ಮಕರ ಸಂಕ್ರಾಂತಿ ಹಬ್ಬದಂದು ಜರುಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ADVERTISEMENT

ದಟ್ಟ ಮಂಜಿನ ನಡುವೆಯೂ ಮೇಳ ಪ್ರದೇಶದಲ್ಲಿ ಭಕ್ತರ ದಂಡು ಹರಿದು ಬರುತ್ತಿದೆ. ಕಳೆದ ಬಾರಿ 25 ಕೋಟಿ ಜನರು ಸಂಗಮದಲ್ಲಿ ಸ್ನಾನ ಮಾಡಿದ್ದರು. ಈ ಬಾರಿ 45 ಕೋಟಿ ಜನರು ಮಹಾಕುಂಭ ಮೇಳದಲ್ಲಿ ಭಾಗಿಯಾಗಲಿದ್ದಾರೆ ಎಂದು ಅಂದಾಜಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ತಿಳಿಸಿದೆ.

ಮಹಾಕುಂಭ ಮೇಳಕ್ಕೆ ಆಗಮಿಸುವ ಯಾತ್ರಿಕರ ಸುರಕ್ಷತೆಗಾಗಿ ಪ್ರಯಾಗರಾಜ್‌ನಾದ್ಯಂತ 50,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಉತ್ತರ ಪ್ರದೇಶದ ಪೊಲೀಸ್ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಹೇಳಿದ್ದಾರೆ.

2019ರ ಕುಂಭಕ್ಕೆ ಹೋಲಿಸಿದರೆ ಈ ಬಾರಿ ಭದ್ರತೆಗಾಗಿ ಶೇಕಡ 40ರಷ್ಟು ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗುವುದು. ಜತೆಗೆ, ಜನಸಂದಣಿ ನಿರ್ವಹಣೆ ಮತ್ತು ಸಂಚಾರ ನಿಯಮಗಳಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಶಾಂತ್ ಹೇಳಿದ್ದಾರೆ.

ಮೇಳಕ್ಕೆ ಭೇಟಿ ನೀಡುವ ಯಾತ್ರಿಕರ ಸಂಖ್ಯೆಯನ್ನು ಲೆಕ್ಕ ಹಾಕುವುದು ಈವರೆಗೆ ಸವಾಲಾಗಿತ್ತು. ಹಾಗಾಗಿ, ಈ ಬಾರಿ ಎ.ಐ ಆಧಾರಿತ 2,700 ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸುತ್ತಿದ್ದು, ಯಾತ್ರಿಕರ ಸಂಖ್ಯೆಯನ್ನು ನಿಖರವಾಗಿ ತಿಳಿಯಲಿದೆ ’ ಎಂದಿದ್ದಾರೆ.

ಪ್ರತಿ 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭ ಮೇಳವು ಜನವರಿ 13ರಿಂದ ಫೆಬ್ರುವರಿ 26ರವರೆಗೆ ನಡೆಯಲಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.