
ಪ್ರಜಾವಾಣಿ ವಾರ್ತೆನವದೆಹಲಿ (ಐಎಎನ್‌ಎಸ್): ಭೀಕರ ಭೂಕಂಪ ಸಂಭವಿಸಿದ ನೇಪಾಳದಿಂದ ಭಾನುವಾರ 250 ಮಂದಿ ಭಾರತೀಯರನ್ನು ರಕ್ಷಿಸಿ ವಾಯುಪಡೆಯ ಹೆಲಿಕಾಪ್ಟರ್ ಮೂಲಕ ಭಾರತಕ್ಕೆ ಕರೆತರಲಾಗಿದೆ.
‘ವಾಯುಪಡೆಯ ಎಂಐ–17 ಹೆಲಿಕಾಪ್ಟರ್‌ಗಳಲ್ಲಿ ಐದು ತುರ್ತುಚಿಕಿತ್ಸಾ ಪಡೆಗಳನ್ನು ನೇಪಾಳಕ್ಕೆ ಕಳುಹಿಸಲಾಗಿದೆ ಗಾಯಗೊಂಡವರನ್ನು ಸೇನಾ ಆಸ್ಪತ್ರೆಗೆ ಸೇರಿಸಲಾಗಿದೆ’ ಎಂದು ರಕ್ಷಣಾ ಸಚಿವಾಲಯದ ವಕ್ತಾರ ಸಿತಾಂಶು ಕರ್ ತಿಳಿಸಿದ್ದಾರೆ.
ರಕ್ಷಿಸಲಾದ ಬಹುತೇಕ ಭಾರತೀಯರು ಮನೆಗಳಿಗೆ ಮರಳಿದ್ದಾರೆ. 252 ಮಂದಿಯನ್ನು ದೆಹಲಿಗೆ ಕಳುಹಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ವಿಕಾಸ್ ಸ್ವರೂಪ್ ಟ್ವೀಟ್ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.